ಅಪಾರ್ಟ್‌ಮೆಂಟ್​ನ 16ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ವ್ಯಕ್ತಿಯೊಬ್ಬರು ಅಪಾರ್ಟ್‌ಮೆಂಟ್​ ಮೇಲಿಂದ ಜಿಗಿದು ಸಾವಿಗೆ ಶರಣಾಗಿರುವ ಘಟನೆ ಯಲಹಂಕ ಬಳಿ ಶನಿವಾರ ನಡೆದಿದೆ.

ರವಿಕುಮಾರ್ ಎಂಬವರು ಅಪಾರ್ಟ್‌ಮೆಂಟ್​ನ 16ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ದಾಖಲಿಸಿಕೊಂಡಿದ್ದಾರೆ.
ಸುದ್ದಿ ತಿಳಿದು ಸ್ಥಳಕ್ಕೆ ತೆರಳಿರುವ ಯಲಹಂಕ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.