ಕಿಚ್ಚ ಸುದೀಪ್ ಅಭಿನಯದ ‘ಮ್ಯಾಕ್ಸ್’ ಡಿಸೆಂಬರ್​ 25ರಂದು ಬಿಡುಗಡೆ

ಕಿಚ್ಚ ಸುದೀಪ್ ಅಭಿನಯದ ‘ಮ್ಯಾಕ್ಸ್’ ಸಿನಿಮಾ ಡಿಸೆಂಬರ್​ 25ರಂದು ಬಿಡುಗಡೆಯಾಗಲಿದೆ.

ಕಲೈಪುಲಿ ಎಸ್. ಧಾನು ನಿರ್ಮಾಣ ಮಾಡಿರುವ ‘ಮ್ಯಾಕ್ಸ್’ ಸಿನಿ ಲೋಕದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ವಿಜಯ್ ಕಾರ್ತಿಕೇಯ ನಿರ್ದೇಶಿಸಿರುವ ‘ಮ್ಯಾಕ್ಸ್’ನಲ್ಲಿ ಕಿಚ್ಚ ಸುದೀಪ್​ ಪ್ರಮುಖ ಪಾತ್ರ ಮಾಡಿದ್ದಾರೆ.

ಈ ನಡುವೆ, ಟೀಸರ್​ ಬಿಡುಗಡೆ ಮಾಡುವ ಮೂಲಕ ಚಿತ್ರತಂಡವು ಬಿಡುಗಡೆಯ ಸುಳಿವು ನೀಡಿದ್ದರೆ, ಇನ್ನೊಂದೆಡೆ, ನಿರ್ಮಾಪಕ ಕಲೈಪುಲಿ ಎಸ್. ಧಾನು ಅವರು ‘ಮ್ಯಾಕ್ಸ್’ ಸಿನಿಮಾ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಡಿಸೆಂಬರ್​ 25ರಂದು ವಿಶ್ವಾದ್ಯಂತ ‘ಮ್ಯಾಕ್ಸ್’ ಸಿನಿಮಾ ರಿಲೀಸ್​ ಆಗಲಿದೆ ಎಂದವರು ತಿಳಸಿದ್ದಾರೆ.