ಅಮರಾವತಿ: ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರಿಸ್ಥಿತಿಯ ಗಂಭೀರತೆ ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಸೋಮವಾರದ ದೆಹಲಿ ಪ್ರವಾಸವನ್ನು ರದ್ದುಗೊಳಿಸಿದ್ದಾರೆ.
ರಾಜ್ಯ ಸರ್ಕಾರದ ಅಂದಾಜಿನ ಪ್ರಕಾರ, ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಪರಿಚಲನೆ ತೀವ್ರಗೊಂಡು ನವೆಂಬರ್ 2ರ ವೇಳೆಗೆ ಪಶ್ಚಿಮ-ಮಧ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತವಾಗಿ ರೂಪುಗೊಳ್ಳುವ ಸಾಧ್ಯತೆಯಿದೆ.

ನವೆಂಬರ್ 3ರ ಬೆಳಿಗ್ಗೆ ಬಾಪಟ್ಲಾ ಸಮೀಪ ತೀವ್ರ ಚಂಡಮಾರುತವಾಗಿ ಕರಾವಳಿ ದಾಟುವ ನಿರೀಕ್ಷೆಯಿದೆ ಎಂದು ಅಂದಾಜಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ನಾಯ್ಡು ಅವರು ‘ಅರ್ನಾಬ್’ ಚಂಡಮಾರುತದ ಬಳಿಕ ಕೈಗೊಂಡ ಪರಿಹಾರ ಕಾರ್ಯಗಳು ಹಾಗೂ ಮುನ್ನೆಚ್ಚರಿಕೆ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದ್ದಾರೆ. ಹವಾಮಾನದಲ್ಲಿನ ಬದಲಾವಣೆಗಳನ್ನು ರಾಜ್ಯ ಆಡಳಿತ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಕರಾವಳಿ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ.



