ಚಿಕ್ಕಮಗಳೂರು: ಜಿಲ್ಲಾಡಳಿತ ಮುಂದೆ ಮೋಸ್ಟ್ ವಾಂಟೆಂಡ್ 6 ನಕ್ಸಲರು ಶರಣಾಗಲು ನಿರ್ಧರಿಸಿರುವುದಾಗಿ ತಿಳಿದು ಬಂದಿದೆ.
ಕಾಡಿನಲ್ಲಿರುವಂತ ಆರು ಮೋಸ್ಟ್ ವಾಂಟೆಂಡ್ ನಕ್ಸಲರು ನಾಡಿಗೆ ಬರಲು ಶರಣಾಗತಿಗೆ ನಿರ್ಧರಿಸಿದ್ದಾರೆ. ಕರ್ನಾಟಕ, ಆಂಧ್ರಪ್ರದೇಶಕ್ಕೆ ಬೇಕಾಗಿದ್ದಂತ ಮೂವರು ನಕ್ಸಲರು ಶರಣಾಗಲು ನಿರ್ಧರಿಸಿದ್ದಾರೆ.
ಈ ಬಗ್ಗೆ ಶಾಂತಿಗಾಗಿ ನಾಗರೀಕ ವೇದಿಕೆಗೆ ನಕ್ಸಲರ ತಂಡದಿಂದ ಪತ್ರವನ್ನು ಬರೆಯಲಾಗಿದೆ. ತಾವು ಎರಡು ಮೂರು ದಿನಗಳಲ್ಲಿ ಜಿಲ್ಲಾಡಳಿತದ ಮುಂದೆ ಶರಣಾಗಲು ನಿರ್ಧರಿಸಿರುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ.
ನಕ್ಸಲರು ಶರಣಾಗತಿ ಬಗ್ಗೆ ಈಗಾಗಲೇ ಶಾಂತಿಗಾಗಿ ನಾಗರೀಕ ವೇದಿಕೆಯಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಜೊತೆಗೆ ಮಾತನಾಡಲಾಗಿದೆ ಎಂಬುದಾಗಿ ಹೇಳಲಾಗುತ್ತಿದೆ.
ಈ ಹಿನ್ನಲೆಯಲ್ಲಿ ಕರ್ನಾಟಕ ತುಂಗಾ ದಳದ ನಕ್ಸಲ್ ನಾಯಕಿ ಮುಂಡಗಾರು ಲತಾ, ಸುಂದರಿ, ದಕ್ಷಿಣ ಭಾರತದ ಮೋಸ್ಟ್ ವಾಂಟೆಂಡ್ ನಕ್ಸಲ್ ಜೀಶ, ಆಂಧ್ರ ಪ್ರದೇಶದ ಕೆ.ವಸಂತ, ಮಾರೆಪ್ಪ ಅರೋಲಿ 3 ದಿನಗಳಲ್ಲಿ ಶರಣಾಗೋ ಸಾಧ್ಯತೆ ಇದೆ.
ಮೂರು ತಿಂಗಳಿನಿಂದ ಚಿಕ್ಕಮಗಳೂರು, ಉಡುಪಿ ಭಾಗದಲ್ಲಿ ನಕ್ಸಲ್ ಚಟುವಟಿಕೆ ಹೆಚ್ಚಾಗಿತ್ತು. ಹೀಗಾಗಿಯೇ ಸಿಎಂ ಸಿದ್ಧರಾಮಯ್ಯ ಶರಣಾಗತಿಗೆ ಆಹ್ವಾನಿಸಿ, ಉತ್ತಮ ಬದುಕು ಕಟ್ಟಿಕೊಡೋದಕ್ಕೆ ಸರ್ಕಾರ ಬದ್ಧವಾಗಿದೆ ಅಂತ ಆಫರ್ ನೀಡಿದ್ದರು.
ವಿಕ್ರಂ ಎನ್ ಕೌಂಟರ್ ಬಳಿಕ ಸರ್ಕಾರವು ಶರಣಾಗತಿಗೆ ಹೆಚ್ಚು ಆದ್ಯತೆಯನ್ನು ನೀಡಿತ್ತು. ಈ ಹಿನ್ನಲೆಯಲ್ಲೇ ಕರ್ನಾಟಕ, ಆಂಧ್ರಪ್ರದೇಶಕ್ಕೆ ಬೇಕಾಗಿದ್ದಂತ ಮೋಸ್ಟ್ ವಾಂಟೆಂಡ್ ಆರು ನಕ್ಸಲರು ಶರಣಾಗತಿಗೆ ನಿರ್ಧರಿಸಿದ್ದಾರೆ.




