BREAKING: ಬೆಂಗಳೂರಲ್ಲಿ ಭಾರೀ ಮಳೆಗೆ ಕಾಂಪೌಂಡ್ ಗೋಡೆ ಕುಸಿದು ಮೂವರು ಮಕ್ಕಳು ಸೇರಿ 7 ಮಂದಿ ದುರ್ಮರಣ

ಬೆಂಗಳೂರು: ರಾಜಧಾನಿಯಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಈ ಭೀಕರ ಮಳೆಗೆ ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಇಂದು ಸಂಜೆ ದಿಢೀರ್ ಕುಸಿದು ಬಿದ್ದಿದೆ. ಗೋಡೆಯ ಅವಶೇಷಗಳಡಿ ಸಿಲುಕಿ ಮೂವರು ಮಕ್ಕಳು ಸೇರಿದಂತೆ 7 ಮಂದಿ ಬಲಿಯಾಗಿದ್ದಾರೆ.

ಘಟನೆಯ ವಿವರ:

ಬೌರಿಂಗ್ ಆಸ್ಪತ್ರೆಯ ತುರ್ತು ಅಪಘಾತ ವಿಭಾಗದ (Emergency Ward) ಗೇಟ್ ಬಳಿ ಇರುವ ಕಾಂಪೌಂಡ್ ಗೋಡೆ ಮಳೆಯ ರಭಸಕ್ಕೆ ಕುಸಿತಗೊಂಡಿದೆ. ಮಳೆಯಿಂದ ರಕ್ಷಿಸಿಕೊಳ್ಳಲು ಗೋಡೆಯ ಬಳಿ ಆಶ್ರಯ ಪಡೆದಿದ್ದವರು ಈ ಅವಘಡಕ್ಕೆ ಸಿಲುಕಿದ್ದಾರೆ ಎನ್ನಲಾಗಿದೆ.

ಅವಶೇಷಗಳಡಿ ಸಿಲುಕಿದವರು:

ಪ್ರಾಥಮಿಕ ವರದಿಗಳ ಪ್ರಕಾರ, ಗೋಡೆ ಕುಸಿದಾಗ ಅದರ ಅಡಿಯಲ್ಲಿ ಮೂವರು ಮಕ್ಕಳು ಹಾಗೂ ನಾಲ್ವರು ವಯಸ್ಕರು ಸಿಲುಕಿದ್ದರು ಎಂದು ಹೇಳಲಾಗುತ್ತಿದೆ. ಸ್ಥಳೀಯರು ಮತ್ತು ಆಸ್ಪತ್ರೆಯ ಸಿಬ್ಬಂದಿ ತಕ್ಷಣವೇ ಧಾವಿಸಿದ್ದು, ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದರು.

ಮೂವರು ಮಕ್ಕಳು ಸೇರಿ ಏಳು ಮಂದಿ ದುರ್ಮರಣ:

ಘಟನೆ ಸಂಭವಿಸಿದ ತಕ್ಷಣ ಅಗ್ನಿಶಾಮಕ ದಳ ಮತ್ತು ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಧಾವಿಸುತ್ತಿದ್ದರು. ಮಳೆ ಸುರಿಯುತ್ತಲೇ ಇರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿತ್ತು. ಜೆಸಿಬಿ ಮೂಲಕ ಗೋಡೆಯ ಅವಶೇಷಗಳನ್ನು ತೆರವುಗೊಳಿಸಿ, ಅಡಿಯಲ್ಲಿ ಸಿಲುಕಿರುವವರನ್ನು ಹೊರತೆಗೆಯುವ ಪ್ರಯತ್ನ ನಡೆಸಲಾಗಿತ್ತು. ಆದರೇ ಕಾರ್ಯಾಚರಣೆಯ ವೇಳೆಗೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಮೂವರು ಮಕ್ಕಳು ಸೇರಿದಂತೆ 7 ಮಂದಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.