ಬೆಳ್ಳಂಬೆಳಿಗ್ಗೆ ಬಸ್ ಅಪಘಾತ; ಮೂವರು ದುರ್ಮರಣ

ತುಮಕೂರು: ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಖಾಸಗಿ ಬಸ್ಸೊಂದು ಅಪಘಾತಕ್ಕೀಡಾಗಿ ಮೂವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ಸು ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಗೋವಾದಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್​ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ನಂತರ ಬಸ್ ಪಲ್ಟಿಯಾಗಿದೆ. ಇಂದು ಬೆಳಗಿನ ಜಾವ ಅಪಘಾತ ಸಂಭವಿಸಿದ್ದು ಸುಮಾರು 20 ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. .