ತಾಳಿಕೋಟೆ ಬಳಿ ಭೀಕರ ಅಪಘಾತ; ಐವರ ಸಾವು

ವಿಜಯಪುರ: ವಿಜಯಪುರ ಜಿಲ್ಲೆ ತಾಳಿಕೋಟೆ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ. ತಾಳಿಕೋಟೆ ತಾಲೂಕಿನ ಬಿಳೆಬಾವಿ ಕ್ರಾಸ್ ಬಳಿ ಕಾರಿಗೆ ಕಬ್ಬು ಕಟಾವು ಮಷಿನ್​ ಡಿಕ್ಕಿಯಾಗಿ ಕಾರಿನಲ್ಲಿದ್ದವರು ಮೃತಪಟ್ಟಿದ್ದಾರೆ.

ಯಾದಗಿರಿಯಿಂದ ವಿಜಯಪುರಕ್ಕೆ ಪ್ರಯಾಣಿಕರನ್ನು ಕರೆತರುತ್ತಿದ್ದ ಕಾರು ಕಬ್ಬು ಕಟಾವು ಮಷಿನ್’ಗೆ ಅಪ್ಪಳಿಸಿದೆ ​​ ಎನ್ನಲಾಗಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ತಾಳಿಕೋಟೆ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.