ಪ್ರಯಾಣಿಕರ ಗಮನಕ್ಕೆ: ಬೆಂಗಳೂರು-ಕಲಬುರಗಿ ನಡುವೆ ವಿಶೇಷ ರೈಲು ಸಂಚಾರ

Charging points in trains to be switched off at night Strict directive from the Railway Department

ಕ್ರಿಸ್ ಮಸ್ ಹಬ್ಬದ ನಂತರದ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಕಲಬುರಗಿ ನಿಲ್ದಾಣಗಳ ನಡುವೆ ಪ್ರತಿ ದಿಕ್ಕಿನಲ್ಲಿ ಎರಡು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲಿದೆ. ವಿವರಗಳು ಈ ಕೆಳಗಿನಂತಿವೆ:

ರೈಲು ಸಂಖ್ಯೆ 06519 ಎಸ್ಎಂವಿಟಿ ಬೆಂಗಳೂರು-ಕಲಬುರಗಿ ವಿಶೇಷ ಎಕ್ಸ್ ಪ್ರೆಸ್ ರೈಲು ಡಿಸೆಂಬರ್ 27 ಮತ್ತು 28 ರಂದು ರಾತ್ರಿ 9.15ಕ್ಕೆ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಹೊರಡಲಿದ್ದು ಮರುದಿನ ಬೆಳಗ್ಗೆ 7.40ಕ್ಕೆ ಕಲಬುರಗಿ ತಲುಪಲಿದೆ.

ರೈಲು ಸಂಖ್ಯೆ 06520 ಕಲಬುರಗಿ – ಎಸ್ ಎಂ ವಿ ಟಿ ಬೆಂಗಳೂರು ಎಕ್ಸ್ ಪ್ರೆಸ್ ವಿಶೇಷ ರೈಲು ಕಲಬುರಗಿಯಿಂದ ಡಿಸೆಂಬರ್ 28 ಮತ್ತು 29 ರಂದು ಬೆಳಿಗ್ಗೆ 9.35ಕ್ಕೆ ಹೊರಡಲಿದ್ದು ಅದೇ ದಿನ ರಾತ್ರಿ 8 ಗಂಟೆಗೆ ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ತಲುಪಲಿದೆ.

ಈ ವಿಶೇಷ ರೈಲುಗಳಿಗೆ ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ ಮತ್ತು ಶಹಾಬಾದ್ ಗಳಲ್ಲಿ ನಿಲುಗಡೆ ಇರಲಿದೆ.

ಈ ವಿಶೇಷ ರೈಲು ಮೂರು ಎಸಿ ತ್ರಿ ಟೈರ್ ಬೋಗಿಗಳು, ಮೂರು ದ್ವಿತೀಯ ದರ್ಜೆ ಸ್ಲೀಪರ್ ಕ್ಲಾಸ್ ಬೋಗಿಗಳು, ಒಂಬತ್ತು ದ್ವಿತೀಯ ದರ್ಜೆ ಬೋಗಿಗಳು ಮತ್ತು ಎರಡು ಲಗೇಜ್ ಕಮ್ ಬ್ರೇಕ್ ವ್ಯಾನ್ (ದಿವ್ಯಾಂಗ ಸ್ನೇಹಿ ಕಂಪಾರ್ಟ್ಮೆಂಟ್ ನೊಂದಿಗೆ) ಬೋಗಿಗಳನ್ನು ಹೊಂದಿರಲಿದೆ.

ಈ ರೈಲುಗಳ ಪ್ರತಿ ನಿಲ್ದಾಣದ ಆಗಮನ, ನಿರ್ಗಮನ ಸಮಯಕ್ಕಾಗಿ, ಪ್ರಯಾಣಿಕರು ಭಾರತೀಯ ರೈಲ್ವೆ ಜಾಲತಾಣ www.enquiry.indianrail.gov.in ಗೆ ಭೇಟಿ ನೀಡಿ ಅಥವಾ ಸಹಾಯವಾಣಿ 139ಕ್ಕೆ ಕರೆ ಮಾಡುವ ಮೂಲಕ ಮಾಹಿತಿ ಪಡೆದುಕೊಳ್ಳಬಹುದು.