ಹುಬ್ಬಳ್ಳಿ-ರಾಮೇಶ್ವರಂ ಸಾಪ್ತಾಹಿಕ ವಿಶೇಷ ರೈಲು ಸೇವೆ ವಿಸ್ತರಣೆ

ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ-ರಾಮೇಶ್ವರಂ ನಿಲ್ದಾಣಗಳ ಮಧ್ಯ ಸಂಚರಿಸುವ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ರೈಲುಗಳ ಅವಧಿ ವಿಸ್ತರಿಸಲು ರೈಲ್ವೆ ಮಂಡಳಿಯು ಅನುಮೋದನೆ ನೀಡಿದೆ. ವಿವರಗಳು ಈ ಕೆಳಗಿನಂತಿವೆ:

ರೈಲು ಸಂಖ್ಯೆ 07355 ಎಸ್ಎಸ್ಎಸ್ ಹುಬ್ಬಳ್ಳಿ-ರಾಮೇಶ್ವರಂ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು ಜನವರಿ 4 ರಿಂದ ಜೂನ್ 28, 2025 ರವರೆಗೆ ತನ್ನ ಸೇವೆ ಮುಂದುವರಿಸಲಿದೆ. ಈ ಮೊದಲು ಡಿಸೆಂಬರ್ 28, 2024 ರವರೆಗೆ ಓಡಿಸಲು ಸೂಚಿಸಲಾಗಿತ್ತು.

ರೈಲು ಸಂಖ್ಯೆ 07356 ರಾಮೇಶ್ವರಂ-ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು ಜನವರಿ 5 ರಿಂದ ಜೂನ್ 29, 2025 ರವರೆಗೆ ತನ್ನ ಸೇವೆ ಮುಂದುವರಿಸಲಿದೆ. ಈ ಮೊದಲು ಡಿಸೆಂಬರ್ 29, 2024 ರವರೆಗೆ ಓಡಿಸಲು ಸೂಚಿಸಲಾಗಿತ್ತು.

ಮಧುರೈ ವಿಭಾಗದ ವ್ಯಾಪ್ತಿಯಲ್ಲಿ ಬರುವ ಶಿವಗಂಗಾ ನಿಲ್ದಾಣದಲ್ಲಿ ಈ ರೈಲುಗಳಿಗೆ ಹೆಚ್ಚುವರಿ ನಿಲುಗಡೆಯನ್ನು ಒದಗಿಸಲಾಗಿದೆ.

ಜನವರಿ 4, 2025 ರಿಂದ ರೈಲು ಸಂಖ್ಯೆ 07355 ಎಸ್ಎಸ್ಎಸ್ ಹುಬ್ಬಳ್ಳಿ-ರಾಮೇಶ್ವರಂ ಮತ್ತು ಜನವರಿ 5, 2025 ರಿಂದ ರೈಲು ಸಂಖ್ಯೆ 07356 ರಾಮೇಶ್ವರಂ- ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ರೈಲುಗಳ ಪರಿಷ್ಕೃತ ಸಮಯ ಜಾರಿಗೆ ಬರಲಿದೆ.

ವಿವರವಾದ ಸಮಯಗಳಿಗಾಗಿ, ದಯವಿಟ್ಟು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ (https://swr.indianrailways.gov.in/view_detail.jsp?lang=0&dcd=8152&id=0,4,268) ಅಥವಾ ಭಾರತೀಯ ರೈಲ್ವೆ ವೆಬ್ಸೈಟ್ (www.enquiry.indianrail.gov.in) ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು.