ರಾಜ್ಯ ಸಾರಿಗೆ ಬಸ್ಸುಗಳ ಪ್ರಯಾಣ ದರ ಶೇ.15ರಷ್ಟು ಹೆಚ್ಚಳಕ್ಕೆ ಸಂಪುಟ ಸಭೆ ಅನುಮೋದನೆ | KSRTC Bus

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಾರಿಗೆ ಬಸ್ಸುಗಳ ಪ್ರಯಾಣದರ ಶೇ.15ರಷ್ಟು ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿದೆ.

ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಸಾರಿಗೆ ಬಸ್ಸುಗಳ ಪ್ರಯಾಣದರ ದರ ಹೆಚ್ಚಳ ಪ್ರಸ್ತಾವನೆ ಕುರಿತಂತೆ ಮಹತ್ವದ ಚರ್ಚೆ ನಡೆಸಲಾಯಿತು.

ಇಂಧನ ದರ ಹೆಚ್ಚಳ, ಇತರೆ ವೆಚ್ಚದ ಕಾರಣ ಸಾರಿಗೆ ಬಸ್ ಗಳ ಪ್ರಯಾಣ ದರ ಶೇ.42ರಷ್ಟು ಹೆಚ್ಚಳ ಮಾಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈ ಬಗ್ಗೆ ಸಂಪುಟ ಸಭೆಯಲ್ಲಿ ಬಿಸಿ ಬಿಸಿ ಚರ್ಚೆ ನಡೆಸಲಾಯಿತು. ಅಂತಿಮವಾಗಿ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಶೇ.15ರಷ್ಟು ಸಾರಿಗೆ ಬಸ್ ಗಳ ಪ್ರಯಾಣದರ ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿದೆ. ಈ ಮೂಲಕ ರಾಜ್ಯದ ಜನತೆಗೆ ಬಿಗ್ ಶಾಕ್ ನೀಡಲಾಗಿದೆ.