ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ ಮೂವರ ಡೆಡ್ಲಿ ಮರ್ಡರ್: ಪತಿಯಿಂದಲೇ ಪತ್ನಿ, ಇಬ್ಬರು ಮಕ್ಕಳ ಹತ್ಯೆ

ಬೆಂಗಳೂರು: ನಗರದಲ್ಲಿ ಜನರೇ ಬೆಚ್ಚಿ ಬೀಳುವಂತೆ ಪತಿಯಿಂದಲೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿರುವಂತ ಘಟನೆ ವರದಿಯಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.

ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿಯಲ್ಲಿ ತ್ರಿಬಲ್ ಮರ್ಡರ್ ಮಾಡಲಾಗಿದೆ. ಪತಿಯೇ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿರುವುದಾಗಿ ತಿಳಿದು ಬಂದಿದೆ.

ಜಾಲಹಳ್ಳಿ ಕ್ರಾಸ್ ಬಳಿಯಲ್ಲಿನ ಡೆಡ್ಲಿ ಮರ್ಡರ್ ವಿಷಯ ತಿಳಿದು ಸ್ಥಳಕ್ಕೆ ಪೀಣ್ಯ ಠಾಣೆಯ ಪೊಲೀಸರು ದೌಡಾಯಿಸಿದ್ದಾರೆ. ಈ ಘಟನೆ ಸಂಬಂಧ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದು, ತನಿಖೆ ಕೈಗೊಂಡಿದ್ದಾರೆ.