BREAKING: ತುಮಕೂರಲ್ಲಿ ಆಯಿಲ್ ಟ್ಯಾಂಕ್ ಸ್ಪೋಟಗೊಂಡು ಘೋರ ದುರಂತ: ಇಬ್ಬರು ಕಾರ್ಮಿಕರು ಸಾವು, ಮೂವರಿಗೆ ಗಾಯ

ತುಮಕೂರು: ಜಿಲ್ಲೆಯಲ್ಲಿ ಕಾರ್ಖಾನೆಯೊಂದರಲ್ಲಿ ಆಯಿಲ್ ಟ್ಯಾಂಕ್ ಸ್ಪೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ.

ತುಮಕೂರು ಜಿಲ್ಲೆಯ ಅಂತಸರನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ಪರಿಮಣ ಪುಡ್ ಇಂಡಸ್ಟ್ರೀಸ್ ಎನ್ನುವಂತ ಕಾರ್ಖಾನೆಯಲ್ಲಿ ಬತ್ತದ ಹೊಟ್ಟಿನಿಂದ ಎಣ್ಣೆ ತೆಗೆಯುವಂತ ಕೆಲಸ ಮಾಡಲಾಗುತ್ತಿತ್ತು. ಹೀಗಾಗೆ ಎಣ್ಣೆ ತೆಗೆಯುತ್ತಿದ್ದಂತ ಸಂದರ್ಭದಲ್ಲಿ ಆಯಿಲ್ ಟ್ಯಾಂಕ್ ಸ್ಪೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರು ದುರ್ಮರಣ ಹೊಂದಿದ್ದಾರೆ.

ಇನ್ನೂ ಈ ದುರಂತದಲ್ಲಿ ಮತ್ತೆ ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.