ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವಂತ ಮೈಕ್ರೋ ಫೈನಾನ್ಸ್ ಗಳ ಕಿರುಕುಳ ತಡೆಗಾಗಿ ಸುಗ್ರೀವಾಜ್ಞೆ ತರುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದರು. ಅದರಂತೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆಗೆ ಅನುಮೋದನೆ ನೀಡಲಾಗಿದೆ.
ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಚಿವ ಸಂಪುಟ ಸಭೆಯಲ್ಲಿ ಮೈಕ್ರೋ ಫೈನಾನ್ಸ್ ಗಳ ಹಾವಳಿ, ಕಿರುಕುಳದ ಬಗ್ಗೆ ಬಿಸಿ ಬಿಸಿ ಚರ್ಚೆ ನಡೆಯಿತು. ಅಂತಿಮವಾಗಿ ಸುಗ್ರೀವಾಜ್ಞೆಗೆ ಸಂಪುಟ ಒಕ್ಕೊರಲ ಒಪ್ಪಿಗೆಯನ್ನು ಸೂಚಿಸಿದೆ.
ಇನ್ನೂ ರಾಜ್ಯ ಸಚಿವ ಸಂಪುಟ ಅನುಮೋದಿಸಿರುವಂತ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯ ಮಸೂಧೆಯನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗುತ್ತದೆ. ರಾಜ್ಯಪಾಲರ ಅಂಕಿತ ಪಡೆದ ಬಳಿಕ ಕಾಯ್ದೆಯಾಗಿ ಜಾರಿಯಾಗಲಿದೆ.




