ಕ್ವೆಟ್ಟಾ: ನೈಋತ್ಯ ಪಾಕಿಸ್ತಾನದಲ್ಲಿ ಮಂಗಳವಾರ ಪ್ರತ್ಯೇಕತಾವಾದಿ ಉಗ್ರರು ಪ್ಯಾಸೆಂಜರ್ ರೈಲಿನ ಮೇಲೆ ಗುಂಡು ಹಾರಿಸಿದ್ದು, ರೈಲು ಚಾಲಕ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮತ್ತು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಪಾಕಿಸ್ತಾನದ ನೈಋತ್ಯ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾದಿಂದ ಖೈಬರ್ ಪಖ್ತುಂಖ್ವಾದ ಪೇಶಾವರ್‌ಗೆ ರೈಲು ಹೋಗುತ್ತಿದ್ದಾಗ ಗುಂಡು ಹಾರಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಒಂದು ಹೇಳಿಕೆಯಲ್ಲಿ, ಉಗ್ರಗಾಮಿ ಪ್ರತ್ಯೇಕತಾವಾದಿ ಗುಂಪು ಬಲೂಚ್ ಲಿಬರೇಶನ್ ಆರ್ಮಿ (ಬಿಎಲ್‌ಎ) ದಾಳಿಯ ಹೊಣೆಯನ್ನು ಹೊತ್ತುಕೊಂಡಿದ್ದು, ಭದ್ರತಾ ಪಡೆಗಳು ಸೇರಿದಂತೆ ರೈಲಿನಿಂದ ಜನರನ್ನು ಒತ್ತೆಯಾಳುಗಳಾಗಿ ತೆಗೆದುಕೊಂಡಿರುವುದಾಗಿ ಹೇಳಿದೆ.




