ಬೆಂಗಳೂರು: 1981ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದಂತ ಓಂ ಪ್ರಕಾಶ್(68) ಅವರು, ಕರ್ನಾಟಕದ ಡಿಜಿ ಮತ್ತು ಐಜಿಪಿಯಾಗಿಯೂ ಕಾರ್ಯ ನಿರ್ವಹಿಸಿದ್ದರು. ಇಂತಹ ಅವರನ್ನು ಮನೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಿರೋದಾಗಿ ಹೇಳಲಾಗುತ್ತಿದೆ.
ಬೆಂಗಳೂರಿನ ಹೆಚ್ ಎಸ್ ಆರ್ ಲೇಔಟ್ ನಲ್ಲಿ 2015ರಲ್ಲಿ ಕರ್ನಾಟಕದ 38ನೇ ಡಿಜಿ ಮತ್ತು ಐಜಿಪಿಯಾಗಿದ್ದಂತ ಓಂ ಪ್ರಕಾಶ್ ಸಾವನ್ನಪ್ಪಿರುವುದಾಗಿ ಪತ್ನಿ ಮಾಹಿತಿ ನೀಡಿದ್ದಾರೆ.
ಅಂದಹಾಗೇ ಎರಡು ಮೂರು ದಿನಗಳ ಹಿಂದೆ ಗಂಡ-ಹೆಂಡತಿ ನಡುವೆ ಜಗಳ ಉಂಟಾಗಿತ್ತು. ಇಬ್ಬರ ನಡುವೆ ಹೊಂದಾಣಿಕೆ ಕೂಡ ಇರಲಿಲ್ಲ ಎನ್ನಲಾಗುತ್ತಿದೆ. ಈ ವಿಚಾರವನ್ನು ಐಪಿಎಸ್ ಗ್ರೂಪ್ ನಲ್ಲಿ ಓಂ ಪ್ರಕಾಶ್ ಅವರೇ ಹಂಚಿಕೊಂಡಿದ್ದರು ಎನ್ನಲಾಗಿದೆ.
ನನಗೆ ಬೆದರಿಕೆ ಇದೆ ಎಂಬುದಾಗಿ ಸಂದೇಶ ಕೂಡ ನಿವೃತ್ತ ಡಿಜಿ ಮತ್ತು ಐಜಿಪಿ ಐಪಿಎಸ್ ಗ್ರೂಪಿನಲ್ಲಿಯೇ ಹಾಕಿದ್ದರು ಎಂಬುದಾಗಿ ತಿಳಿದು ಬಂದಿದೆ. ಇಂತಹ ಅವರು ಇಂದು ಬೆಂಗಳೂರಿನ ಹೆಚ್ ಎಸ್ ಆರ್ ಲೇಔಟ್ ನಲ್ಲಿರುವಂತ ತಮ್ಮ ಮನೆಯಲ್ಲಿ ರಕ್ತದ ಮಡುವಿನಲ್ಲಿ ಸಾವನ್ನಪ್ಪಿರುವಂತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಈ ವಿಷಯ ತಿಳಿದು ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.



