ಬೆಂಗಳೂರು: ಆರ್ ಸಿ ಬಿ ವಿಜಯೋತ್ಸವ ಕಾರ್ಯಕ್ರಮದ ವೇಳೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದರು. ಇಂತಹ ಕುಟುಂಬಸ್ಥರಿಗೆ ತಲಾ 25 ಲಕ್ಷ ಪರಿಹಾರ ನೀಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ.
ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ದುರಂತದಲ್ಲಿ ಮೃತರಾದವರ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರವನ್ನು ತಲಾ 25 ಲಕ್ಷ ರೂ.ಗಳಿಗೆ ಹೆಚ್ಚಿಸುವಂತೆ ಆದೇಶಿಸಿದ್ದಾರೆ.
ಈ ಮೊದಲು ತಲಾ ಹತ್ತು ಲಕ್ಷ ರೂ.ಗಳ ಪರಿಹಾರವನ್ನು ಸರ್ಕಾರ ಘೋಷಿಸಿತ್ತು. ಈಗ ಆ ಪರಿಹಾರದ ಮೊತ್ತವನ್ನು 25 ಲಕ್ಷಕ್ಕೆ ಸರ್ಕಾರ ಹೆಚ್ಚಳ ಮಾಡಿದೆ. ಮೃತ 11 ಮಂದಿ ಕುಟುಂಬಕ್ಕೆ ವಿತರಣೆ ಮಾಡುವಂತೆ ಸಿಎಂ ಸಿದ್ಧರಾಮಯ್ಯ ಸೂಚಿಸಿದ್ದಾರೆ.




