ಯುಜಿಸಿಇಟಿಗೆ ಆಪ್ಷನ್ಸ್ ದಾಖಲಿಸಲು ಜುಲೈ 22ರವರೆಗೆ ದಿನಾಂಕ ವಿಸ್ತರಣೆ

ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಇಚ್ಛೆ/ಆಯ್ಕೆಗಳನ್ನು (ಆಪ್ಷನ್ಸ್ ) ದಾಖಲಿಸಲು ಇದ್ದ ಕೊನೆ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜುಲೈ 22ರವರೆಗೆ ವಿಸ್ತರಿಸಿದೆ.

ಎಂಜಿನಿಯರಿಂಗ್, ದಂತ ವೈದ್ಯಕೀಯ, ಪಶು ವೈದ್ಯಕೀಯ, ಕೃಷಿ ವಿಜ್ಞಾನ, ಬಿಎಸ್ ಸಿ ನರ್ಸಿಂಗ್, ಬಿಪಿಟಿ, ಬಿಪಿಒ, ಎಎಚ್ಎಸ್ ಕೋರ್ಸ್ ಗಳ ಸೀಟ್ ಮ್ಯಾಟ್ರಿಕ್ಸ್ ಸರ್ಕಾರದಿಂದ ಬಂದಿದ್ದು ಜುಲೈ 8ರಿಂದಲೂ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ವೈದ್ಯಕೀಯ, ಆಯುರ್ವೇದ, ಹೋಮಿಯೋಪತಿ ಮತ್ತು ಯುನಾನಿ, ಫಾರ್ಮಸಿ ಕೋರ್ಸ್ ಗಳ ಸೀಟ್ ಮ್ಯಾಟ್ರಿಕ್ಸ್ ಸರ್ಕಾರದಿಂದ ಬಂದ ನಂತರ ಅವುಗಳಿಗೂ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗುವುದು. ಕೊನೆ ದಿನಾಂಕದವರೆಗೆ ಎಷ್ಟು ಬಾರಿಯಾದರೂ ಇಚ್ಛೆ/ಆಯ್ಕೆಗಳನ್ನು ಬದಲಿಸಿಕೊಳ್ಳಬಹುದು. ಆದರೆ ಅಂತಿಮವಾಗಿ ಬದಲಿಸಿದ್ದ ವಿವರಗಳನ್ನು ಮ…