ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಮುಂದೂಡಿಕೆ: ಎಂದಿನಂತೆ ಬಸ್ ಸಂಚಾರ ಆರಂಭ

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರು ಕರೆ ನೀಡಿದ್ದಂತ ಮುಷ್ಕರಕ್ಕೆ ಹೈಕೋರ್ಟ್ ಸರ್ಕಾರವು ಎಸ್ಮಾ ಜಾರಿಗೊಳಿಸಬಹುದು ಎಂಬುದಾಗಿ ಎಚ್ಚರಿಕೆ ನೀಡುವ ಮೂಲಕ ಬ್ರೇಕ್ ಹಾಕಿತ್ತು. ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಮುಂದೂಡಿಕೆ ಮಾಡಲಾಗಿದೆ. ಹೀಗಾಗಿ ಎಂದಿನಂತೆ ಬಸ್ ಸಂಚಾರ ಆರಂಭಗೊಂಡಿದೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಮುಷ್ಕರ ಮುಂದೂಡಿದ್ರೆ ಎಸ್ಮಾ ಕಾಯ್ದೆ ಉಲ್ಲಂಘನೆ ಆಗಲ್ಲ. ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಯಬೇಕು. ಜಂಟಿ ಕ್ರಿಯಾ ಸಮಿತಿಗೆ ನೋಟಿಸ್ ಕೊಡಿ ಎಂಬುದಾಗಿ ಹೈಕೋರ್ಟ್ ತಿಳಿಸಿದೆ ಎಂದರು.

ನಾವು ಹೈಕೋರ್ಟ್ ಸೂಚನೆಯ ಕಾರಣದಿಂದ ಮುಷ್ಕರ ಮುಂದೂಡಿಕೆ ಮಾಡಲಾಗಿದೆ. ಕೋರ್ಟ್ ಮುಂದಿನ ಆದೇಶದಂತೆ ತೀರ್ಮಾನ ಕೈಗೊಳ್ಳಲಾಗುತ್ತದೆ. ಆಗಸ್ಟ್.7ಕ್ಕೆ ಹೈಕೋರ್ಟ್ ವಿಚಾರಣೆ ನಿಗದಿ ಮಾಡಿದೆ. ಕೋರ್ಟ್ ತೀರ್ಪು ಏನು ನೀಡಲಿದೆ ಎಂಬುದಾಗಿ ಕಾದು ನೋಡಬೇಕು ಎಂದರು.

ನಾವು ಮುಷ್ಕರವನ್ನು ಮುಂದೂಡಿದ್ದೇವೆ. ಮುಷ್ಕರ ಮುಂದೂಡಿಕೆ ಮಾಡಿದ್ದರಿಂದ ಎಸ್ಮಾ ಕಾಯ್ದೆ ಉಲ್ಲಂಘನೆಯಾಗುವುದಿಲ್ಲ. ಎಲ್ಲರೂ ದಯಮಾಡಿ ಕೆಲಸಕ್ಕೆ ಹೋಗಿ. ನಾವು ಯಾವುದೇ ತೊಂದರೆಯಾಗದಂತೆ ನಾವು ನೋಡಿಕೊಳ್ಳುತ್ತೇವೆ ಎಂಬುದಾಗಿ ತಿಳಿಸಿದರು.

ರಾಜ್ಯಾಧ್ಯಂತ ಎಂದಿನಂತೆ ಬಸ್ ಸಂಚಾರ ಆರಂಭ

ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯ ಅಧ್ಯಕ್ಷ ಅನಂತ ಸುಬ್ಬರಾವ್ ಅವರು ಈ ಕೂಡಲೇ ನೌಕರರು ಕರ್ತವ್ಯಕ್ಕೆ ಹಾಜರಾಗಿ ಎಂಬುದಾಗಿ ಸೂಚಿಸಿದ್ದಾರೆ. ಈ ಹಿನ್ನಲೆಯಲ್ಲಿ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ರಾಜ್ಯದ ವಿವಿಧೆಡೆಗೆ ಸಾರಿಗೆ ನೌಕರರು ಕೆ ಎಸ್ ಆರ್ ಟಿ ಸಿ ಬಸ್ ಸಂಚಾರವನ್ನು ಆರಂಭಿಸಿದ್ದಾರೆ.

ಹೈಕೋರ್ಟ್ ಎಸ್ಮಾ ಜಾರಿಯ ಎಚ್ಚರಿಕೆ

ಜನರಿಗೆ ನಿಮ್ಮ ಮುಷ್ಕರದಿಂದ ಸಮಸ್ಯೆ ಆಗಬಾರದು. ಮುಷ್ಕರ ನಿಂತಿರುವ ಬಗ್ಗೆ ನಾಳೆ ಮಾಹಿತಿ ನೀಡಬೇಕು. ಇಲ್ಲವಾದರೆ ನಾಳೆ ನ್ಯಾಯಾಂಗ ನಿಂದನೆ ಕೇಸ್ ದಾಖಲು ಮಾಡುವುದಾಗಿ ಹೈಕೋರ್ಟ್ ಸಿಜೆ ವಿಭು ಬಕ್ರು, ನ್ಯಾಯಮೂರ್ತಿ ಸಿ ಎಂ ಜೋಶಿ ಅವರಿದ್ದ ನ್ಯಾಯಪೀಠವು ಎಚ್ಚರಿಕೆ ನೀಡಿದೆ.

ಇಂದು ಸಾರಿಗೆ ನೌಕರರ ಮುಷ್ಕರಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದಂತ ಪಿಐಎಲ್ ಅರ್ಜಿಯನ್ನು ವಿಚಾರಣೆ ನಡೆಸಲಾಯಿತು. ವಾದ ಪ್ರತಿವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು ನಾಲ್ಕು ಸಾರಿಗೆ ನಿಗಮಗಳ ನೌಕರರ ಸಂಘಕ್ಕೆ ನೋಟಿಸ್ ನೀಡಿದೆ.

ಇದೇ ಸಂದರ್ಭದಲ್ಲಿ ಮುಷ್ಕರ ಮುಂದುವರೆಸಿದರೇ ಎಸ್ಮಾ ಅಡಿಯಲ್ಲಿ ಸರ್ಕಾರ ಕ್ರಮ ಕೈಗೊಳ್ಳಬಹುದು ಎಂಬುದಾಗಿಯೂ ಹೈಕೋರ್ಟ್ ತಿಳಿಸಿದೆ. ಹೈಕೋರ್ಟ್ ತರಾಟೆಗೆ ಸಾರಿಗೆ ನೌಕರರ ಸಂಘಟನೆಯ ಜಂಟಿ ಕ್ರಿಯಾ ಸಮಿತಿ ಪರ ವಕೀಲರು ತಬ್ಬಿಬ್ಬಾದರು. ನಾಳೆ ಸಾರಿಗೆ ಮುಷ್ಕರ ನಡೆಸುವುದಿಲ್ಲವೆಂದು ನೌಕರರ ಸಂಘಟನೆ ಪರ ವಕೀಲರು ಹೈಕೋರ್ಟ್ ಗೆ ತಿಳಿಸಿದರು.

ಜನರಿಗೆ ನಿಮ್ಮ ಮುಷ್ಕರದಿಂದ ಸಮಸ್ಯೆ ಆಗಬಾರದು. ಎಸ್ಮಾ ಜಾರಿಯಾದರೂ ಮುಷ್ಕರ ನಡೆಸುವುದು ಕಾನೂನು ಬಾಹಿರವಾಗಿದೆ ಎಂಬುದಾಗಿ ಹೇಳುವ ಮೂಲಕ ನಾಲ್ಕು ಸಾರಿಗೆ ನಿಗಮಗಳ ನೌಕರರ ಸಂಘಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ. ಅಲ್ಲದೇ ಮತ್ತೆ ಎರಡು ದಿನ ಸಾರಿಗೆ ನೌಕರರ ಮುಷ್ಕರಕ್ಕೆ ತಡೆಯಾಜ್ಞೆ ವಿಸ್ತರಿಸಿ, ಆಗಸ್ಟ್.7ಕ್ಕೆ ವಿಚಾರಣೆ ಮುಂದೂಡಿದೆ.