ರೇಣುಕಾಸ್ವಾಮಿ ಕೊಲೆ ಕೇಸ್: ನಟ ದರ್ಶನ್ ಅರೆಸ್ಟ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ನೀಡಲಾಗಿದ್ದಂತ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಈ ಹಿನ್ನಲೆಯಲ್ಲಿ ಅವರನ್ನು ಅವರ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲೇ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ.

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ 2ನೇ ಆರೋಪಿಯಾಗಿದ್ದರು. ಈಗಾಗಲೇ ಎ1 ಆರೋಪಿಯಾಗಿದ್ದಂತ ಪವಿತ್ರಾ ಗೌಡ ಅವರನ್ನು ಪೊಲೀಸರು ಬಂಧಿಸಿದ್ದರು. ಈ ನಂತ್ರ ನಟ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮೀ ನೆಲೆಸಿದ್ದಂತ ಹೊಸಕೆರೆಹಳ್ಳಿಯ ಅಪಾರ್ಮೆಂಟ್ ನಲ್ಲಿ ಅನ್ನಪೂರ್ಣೇಶ್ವರಿ ನಗರದ ಪೊಲೀಸರು ಬಂಧಿಸಿದ್ದಾರೆ.

ಅಂದಹಾಗೇ ಈ ಮೊದಲು ನಟ ದರ್ಶನ್ ನ್ಯಾಯಾಲಕ್ಕೆ ಶರಣಾಗಲಿದ್ದಾರೆ ಎಂಬುದಾಗಿ ಹೇಳಲಾಗುತ್ತಿತ್ತು. ಆದರೇ ಇದೀಗ ನಟ ದರ್ಶನ್ ಅವರನ್ನು ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಬಂಧಿಸಿದ್ದಾರೆ.