ಈ ಬಾರಿ ಮೈಸೂರು ದಸರಾವನ್ನು ಲೇಖಕಿ ಬಾನು ಮುಷ್ತಾಕ್ ಉದ್ಘಾಟಿಸಲಿದ್ದಾರೆ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಸ್ತಕ್ ಅವರು ಉದ್ಘಾಟನೆ ಮಾಡಲಿದ್ದಾರೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ.

ಇಂದು ವಿಧಾನಸೌಧದ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದಾರೆ ಎಂಬುದಾಗಿ ತಿಳಿಸಿದರು.

ಬಾನು ಮುಷ್ತಾಕ್ ಅವರು ಹೋರಾಟದ ಹಿನ್ನಲೆಯಿಂದ ಬಂದ ಮಹಿಳೆಯಾಗಿದ್ದಾರೆ. ರೈತರು, ಕನ್ನಡಪರ ಚಳುವಳಿಗಳಲ್ಲಿ ಭಾಗಿಯಾಗಿ ಕೆಲಸ ಮಾಡಿದವರಾಗಿದ್ದಾರೆ. ಹೀಗಾಗಿ ದಸರಾ ಮಹೋತ್ಸವವನ್ನು ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ್ದೇವೆ ಎಂದರು.