ಮಂಡ್ಯ: ಮದ್ದೂರಲ್ಲಿ ಗಣೇಶ ಮೂರ್ತಿ ವಿಸರ್ಜನೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದಿತ್ತು. ಈ ಗಲಭೆ ಸಂಬಂಧ 22 ಆರೋಪಿಗಳನ್ನು ಬಂಧಿಸಲಾಗಿತ್ತು. ಇದೀಗ ಕೋರ್ಟ್ ಬಂಧಿತ ಎಲ್ಲಾ ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.
ಮಂಡ್ಯ ಜಿಲ್ಲೆಯ ಮದ್ದೂರಲ್ಲಿ ಗಣೇಶ ಮೆರವಣಿಗೆ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದು, ಗಲಾಟೆ ನಡೆದಿತ್ತು. ಈ ಗಲಾಟೆ ಸಂಬಂಧ 22 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಕರೆತಂದಿದ್ದರು.
ಇಂದು ಮಂಡ್ಯದ ಮದ್ದೂರು ತಾಲೂಕು ಕೋರ್ಟ್‌ಗೆ ಹಾಜರು ಪಡಿಸಿದ್ದರು. ಮದ್ದೂರಿನ ಎರಡನೇ ಅಪರ ಸಿವಿಲ್ ನ್ಯಾಯಾಧೀಶರಾದ ಗೋಪಾಲಕೃಷ್ಣ ಅವರ ಮುಂದೆ ಹಾಜರು ಪಡಿಸಲಾಗಿತ್ತು.
ಈ ಪ್ರಕರಣದ ವಿಚಾರಣೆ ನಡೆಸಿದಂತ ಮದ್ದೂರಿನ 2ನೇ ಅಪರ ಸಿವಿಲ್ ನ್ಯಾಯಾಧೀಶರಾದಂತ ಗೋಪಾಲಕೃಷ್ಣ ಅವರು 22 ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದ್ದಾರೆ.




