ಬೆಂಗಳೂರು: ನವೆಂಬರ್.01, 2025ರಿಂದ ಹಳದಿ ಮಾರ್ಗದಲ್ಲಿ ಐದನೇ ಮೆಟ್ರೋ ರೈಲು ಸಂಚರಿಸಲಿದೆ. ಹೀಗಾಗಿ ಪ್ರತಿ 15 ನಿಮಿಷಗಳಿಗೆ ಒಂದು ರೈಲು ಹಳದಿ ಮಾರ್ಗದಲ್ಲಿ ನಾಳೆಯಿಂದ ಸಂಚರಿಸಲಿದೆ.
ಕರ್ನಾಟಕ ರಾಜ್ಯೋತ್ಸವದ 70ನೇ ವರ್ಷದ ಆಚರಣೆಯ ಸಂದರ್ಭದಲ್ಲಿ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (BMRCL), ದಿನಾಂಕ ೧ನೇ ನವೆಂಬರ್ 2025 ರಿಂದ ಹಳದಿ ಮಾರ್ಗದಲ್ಲಿ ಐದನೇ ಮೆಟ್ರೋ ರೈಲನ್ನು ವಾಣಿಜ್ಯ ಸೇವೆಗೆ ಒಳಪಡಿಸುತ್ತಿದೆ.
ಈ ಹೊಸ ರೈಲಿನ ಚಾಲನೆಯಿಂದ, ಹಳದಿ ಮಾರ್ಗದಲ್ಲಿ ಪೀಕ್ ಅವಧಿಯಲ್ಲಿ ರೈಲುಗಳ ಆವರ್ತನವು ಪ್ರತಿ 15 ನಿಮಿಷಕ್ಕೊಮ್ಮೆ ರೈಲುಗಳು ಸಂಚರಿಸುತ್ತವೆ. (ಪ್ರಸಕ್ತ 19 ನಿಮಿಷಗಳ ಅಂತರದ ಬದಲಾಗಿ). ಇದರಿಂದ ಪ್ರಯಾಣಿಕರಿಗೆ ಕಡಿಮೆ ಅವಧಿಯಲ್ಲಿ ಸುಗಮ ಮತ್ತು ನಿರಂತರ ಸೇವೆ ನೀಡಲು ಸಹಾಯಕವಾಗಲಿದೆ. ಈ ಬದಲಾವಣೆ ಎಲ್ಲಾ ದಿನಗಳಿಗೆ ಅನ್ವಯವಾಗುತ್ತದೆ.
ಆರ್.ವಿ. ರಸ್ತೆ ಮತ್ತು ಬೊಮ್ಮಸಂದ್ರ ಟರ್ ಮಿನಲ್ ನಿಲ್ದಾಣಗಳಿಂದ ಹೊರಡುವ ಮೊದಲ ಹಾಗೂ ಕೊನೆಯ ರೈಲುಗಳ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.




