ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 24,00ಕೋಟಿ ರೂ. ಹಣ ಬಿಡುಗಡೆ ಆಗಿದೆ.
1,24,48,000 ಕುಟುಂಬದ ಮನೆಯ ಯಜಮಾನಿಯರಿಗೆ 30 ಕಂತುಗಳಲ್ಲಿ ತಲಾ 2000 ರೂ.ಗಳಂತೆ 60,000 ರೂ.ಗಳನ್ನು ಡಿಬಿಟಿ ಮುಖಾಂತರ ಜಮೆ ಮಾಡಲಾಗಿತ್ತು. ಈಗ 31ನೇ ಕಂತಿನ 24,00ಕೋಟಿ ರೂ. ಹಣ ಬಿಡುಗಡೆ ಆಗಿದೆ.
ಈ ಮೂಲಕ ಗೃಹಲಕ್ಷ್ಮಿ ಯೋಜನೆಗಾಗಿ ರಾಜ್ಯ ಸರ್ಕಾರ ಇದುವರೆಗೂ 74,650 ಕೋಟಿ ರೂ.ಗಳನ್ನು ವ್ಯಯಿಸಿದೆ. ಇದರಿಂದ ಒಬ್ಬ ಮನೆ ಯಜಮಾನಿ ಖಾತೆಗೆ ಒಟ್ಟು 62,000 ರೂ. ಹಣವನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸರ್ಕಾರ ಬಿಡುಗಡೆ ಮಾಡಿದಂತಾಗಿದೆ.
ಕುಟುಂಬದ ದೈನಂದಿನ ಖರ್ಚು, ಮಕ್ಕಳ ಶಿಕ್ಷಣ, ಆರೋಗ್ಯ, ಆಹಾರ ಹಾಗೂ ಇತರೆ ಅಗತ್ಯಗಳಿಗೆ ಬಳಕೆ ಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಹಿಳೆಯರು ಸ್ವಾವಲಂಬಿಗಳಾಗಲೆಂದು ರಾಜ್ಯ ಸರ್ಕಾರ ಮನೆಯ ಯಜಮಾನಿಯರಿಗೆ 31 ಕಂತುಗಳಲ್ಲಿ ತಲಾ 2000 ರೂ.ಗಳಂತೆ ಇದುವರೆಗೂ 62,000 ರೂ. ಹಣವನ್ನು ನಮ್ಮ ಸರ್ಕಾರ ನೀಡಿದೆ. ಕಾಂಗ್ರೆಸ್ ಸರ್ಕಾರ ಮಹಿಳೆಯರ ಪರ ಸರ್ಕಾರ ಎಂಬುದಕ್ಕೆ ಇದೇ ಸಾಕ್ಷಿ ಎಂದು ಎಂಎಲ್ಸಿ ದಿನೇಶ್ ಗೂಳಿಗೌಡ ತಿಳಿಸಿದ್ದಾರೆ.




