ಬೆಂಗಳೂರು: ಸಮಗ್ರ ವಿದ್ಯುತ್ ಅಭಿವೃದ್ದಿ ಯೋಜನೆಯ (ಐಪಿಡಿಎಸ್) ಹಂತ-2 ರ ಅಡಿಯಲ್ಲಿ ಬೆಸ್ಕಾಂ ವ್ಯಾಪ್ತಿಯ ನಗರ ಪ್ರದೇಶದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಐಪಿಡಿಎಸ್ ಐಟಿ ಅಪ್ಲಿಕೇಶನ್ ಅನ್ನು ಬೆಸ್ಕಾಂ ವ್ಯಾಪ್ತಿಯ 20 ಐಪಿಡಿಎಸ್ ಪಟ್ಟಣ ಪ್ರದೇಶಗಳಲ್ಲಿ ಅಳವಡಿಸಿಕೊಳ್ಳಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಈ ಕೆಳಕಂಡ ಪಟ್ಟಣ ಪ್ರದೇಶಗಳಲ್ಲಿ ದಿನಾಂಕ 15.09.2026 ರ ಮಧ್ಯ ರಾತ್ರಿಯಿಂದ 17.09.2026 ರ ಮಧ್ಯ ರಾತ್ರಿವರೆಗೆ ಬೆಸ್ಕಾಂನ ಆನ್ ಲೈನ್ ಸೇವೆಗಳು ಲಭ್ಯ ವಿರುವುದಿಲ್ಲ.
ಪ್ರಸುತ ಚಾಲ್ತಿಯಲ್ಲಿರುವ ಸಾಫ್ಟ್ ವೇರ್ ಅನ್ನು ಉನ್ನುತಿಕರಿಸುವ ಸಲುವಾಗಿ 2 ದಿನಗಳ ಕಾಲ ಆನ್ ಲೈನ್ ಸೇವೆಗಳಾದ ಹೊಸ ಸಂಪರ್ಕ, ಹೆಸರು ವರ್ಗಾವಣೆ, ಲೋಡ್ ಹೆಚ್ಚಳ, ಬಿಲ್ ಪಾವತಿ, ಸೇರಿದಂತೆ ಆನ್ ಲೈನ್ ಸೇವೆಗಳು ಸ್ಥಗಿತಗೊಳ್ಳಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಆನ್ ಲೈನ್ ಸೇವೆ ಸ್ಥಗಿತಗೊಳ್ಳುವ ಪಟ್ಟಣಗಳು: ಬಾಗೇಪಲ್ಲಿ, ದೇವನಹಳ್ಳಿ, ಗುಡಿಬಂಡೆ, ಮಾಗಡಿ, ಮಾಲೂರು, ನೆಲಮಂಗಲ, ಶ್ರೀನಿವಾಸಪುರ, ವಿಜಯಪುರ, ಚನ್ನಗಿರಿ, ಚಿಕ್ಕನಾಯಕನಹಳ್ಳಿ, ಗುಬ್ಬಿ, ಹೊಳಲ್ಕೆರೆ, ಹೊನ್ನಾಳಿ, ಹೊಸದುರ್ಗ, ಜಗಳೂರು, ಕೊರಟಗೆರೆ, ಮಧುಗಿರಿ, ಮೊಳಕಾಲ್ಮೂರು, ಪಾವಗಡ ಹಾಗೂ ತುರುವೇಕೆರೆ, ಐಪಿಡಿಎಸ್ ಪಟ್ಟಣ ಪ್ರದೇಶಗಳಿಗೆ ಹೊಸ ಐಟಿ ಅಪ್ಲಿಕೇಶನ್ಅನ್ನು ವಿಸ್ತರಿಸುವ ಸಲುವಾಗಿ ಮೆಲ್ಕಂಡ ಪಟ್ಟಣ ಪ್ರದೇಶಗಳ ಉಪ ವಿಭಾಗಗಳಲ್ಲಿ ಸದ್ಯ ಚಾಲ್ತಿಯಲ್ಲಿರುವ ಸಾಫ್ಟ್ ವೇರ್ ಅಪ್ಲಿಕೇಶನ್ ಅನ್ನು ಸ್ಥಗಿತಗೊಳಿಸುವುದು ಅನಿವಾರ್ಯವಾಗಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.




