ಬೆಂಗಳೂರು: ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದ ಅರ್ಹ ನಾಗರಿಕರು ಫಾರ್ಮ್-6 ಮೂಲಕ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬೇಕು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಮನವಿ ಮಾಡಿದ್ದಾರೆ.
18 ವರ್ಷ ಪೂರ್ಣಗೊಳಿಸಿರುವ ಯುವಜನರು ಮತದಾರರಾಗಿ ನೋಂದಾಯಿಸಿಕೊಳ್ಳಲು ಮುಂದಾಗಬೇಕು. ಪ್ರತಿಯೊಬ್ಬ ಅರ್ಹ ಮತದಾರರೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೇ ಎಂಬುದನ್ನು ಪರಿಶೀಲಿಸಿ ಖಚಿತಪಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಹೊಸ ಮತದಾರರ ನೋಂದಣಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಶೇಷ ಅಭಿಯಾನ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಅರ್ಹ ನಾಗರಿಕರು ಈ ಅವಕಾಶವನ್ನು ಬಳಸಿಕೊಂಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬೇಕು ಎಂದು ಮನವಿ ಮಾಡಿದ್ದಾರೆ.
ಫಾರ್ಮ್-6 ಮೂಲಕ ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಿದ ಬಳಿಕ ಅರ್ಹರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರಿಸಲಾಗುತ್ತದೆ ಎಂದು ವಿ. ಅನ್ಬುಕುಮಾರ್ ತಿಳಿಸಿದ್ದಾರೆ.



