ಮಥುರಾ: ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಯಮುನಾ ಎಕ್ಸ್ಪ್ರೆಸ್ವೇಯ ರಾಯಾ ಕಟ್ ಸೇತುವೆ ಮೇಲೆ ಶನಿವಾರ ಮುಂಜಾನೆ ಚಲಿಸುತ್ತಿದ್ದ ಬಸ್ಗೆ ಬೆಂಕಿ ಹೊತ್ತಿಕೊಂಡಿದೆ. ಬಸ್ನಲ್ಲಿದ್ದ ಸುಮಾರು 40 ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರತರಲಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ದೆಹಲಿ ಕಾಶ್ಮೀರಿ ಗೇಟ್ನಿಂದ ಮಧ್ಯಪ್ರದೇಶದ ಛತ್ತರ್ಪುರಕ್ಕೆ ತೆರಳುತ್ತಿದ್ದ ಖಜುರಾಹೋ ಟ್ರಾವೆಲ್ಸ್ಗೆ ಸೇರಿದ ಬಸ್ನಲ್ಲಿ ಬೆಳಗಿನ ಜಾವ 1.38ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ.

ಸುಮಾರು ಒಂದೂವರೆ ಗಂಟೆಗಳ ಕಾರ್ಯಾಚರಣೆ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬೆಂಕಿಯ ತೀವ್ರತೆಗೆ ಬಸ್ ಸಂಪೂರ್ಣ ಸುಟ್ಟುಹೋಗಿದ್ದು, ಪ್ರಯಾಣಿಕರ ವಸ್ತುಗಳಿಗೂ ಹಾನಿಯಾಗಿದೆ. ಸದ್ಯ ಯಾವುದೇ ದೂರು ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.



