‘ಸಿನಿ ಸಂವಾದ–2026’ ಕಾರ್ಯಾಗಾರ ಉದ್ಘಾಟನೆ; ‘ಸಿನಿಯಾನ’ ಸಿನಿಮಾ ಆರ್ಕೈವ್ ಪೋರ್ಟಲ್ ಲೋಕಾರ್ಪಣೆ

ಬೆಂಗಳೂರು: ಕರ್ನಾಟಕ ಚಲನಚಿತ್ರ ಅಕಾಡೆಮಿ ವತಿಯಿಂದ ಆಯೋಜಿಸಲಾಗಿರುವ ಮೂರು ದಿನಗಳ ಚಲನಚಿತ್ರ ನಿರ್ಮಾಣ ತರಬೇತಿ ಕಾರ್ಯಾಗಾರ ‘ಸಿನಿ ಸಂವಾದ–2026’ರ ಉದ್ಘಾಟನಾ ಸಮಾರಂಭದಲ್ಲಿ ಮಾಜಿ ಸಂಸದ ಡಿ.ಕೆ. ಸುರೇಶ್ ಭಾಗವಹಿಸಿದರು.

ಇದೇ ಸಂದರ್ಭದಲ್ಲಿ ಕನ್ನಡ ಚಿತ್ರರಂಗದ ಇತಿಹಾಸ ಮತ್ತು ಪರಂಪರೆಯನ್ನು ಡಿಜಿಟಲ್ ರೂಪದಲ್ಲಿ ಸಂರಕ್ಷಿಸುವ ಉದ್ದೇಶದ ಅಕಾಡೆಮಿಯ ಮಹತ್ವಾಕಾಂಕ್ಷಿ ಯೋಜನೆಯಾದ ‘ಸಿನಿಯಾನ’ ಕನ್ನಡ ಸಿನಿಮಾ ಆರ್ಕೈವ್ ವೆಬ್ ಪೋರ್ಟಲ್ ಅನ್ನು ಲೋಕಾರ್ಪಣೆಗೊಳಿಸಲಾಯಿತು.

ಚಿತ್ರರಂಗದ ಯುವ ಪ್ರತಿಭೆಗಳಿಗೆ ತಾಂತ್ರಿಕ ತರಬೇತಿ ನೀಡುವ ಮೂಲಕ ಕನ್ನಡ ಸಿನಿಮಾ ಕ್ಷೇತ್ರವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ಇಂತಹ ಪ್ರಯತ್ನಗಳು ಶ್ಲಾಘನೀಯ ಎಂದು ಡಿ.ಕೆ. ಸುರೇಶ್ ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ, ಹಿರಿಯ ನಿರ್ದೇಶಕ ಗಿರೀಶ್ ಕಾಸರವಳ್ಳಿ, ಚಿತ್ರರಂಗದ ಪ್ರಮುಖರಾದ ಸಾ.ರಾ. ಗೋವಿಂದು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.