ಚೆನ್ನೈ: ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ಅಕ್ವಾನ್ ಚಂಡಮಾರುತದ ಪ್ರಭಾವದಿಂದ ತಮಿಳುನಾಡಿನ ಚೆನ್ನೈ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಗುರುವಾರ ಚೆನ್ನೈ, ತಿರುವಳ್ಳೂರು ಮತ್ತು ಚೆಂಗಲ್ಪಟ್ಟು ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗಲಿದ್ದು, ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ. ದಕ್ಷಿಣ ತಮಿಳುನಾಡು, ಉತ್ತರ ಕರಾವಳಿ ಜಿಲ್ಲೆಗಳು, ಪುದುಚೇರಿ ಮತ್ತು ಕಾರೈಕಲ್ನಲ್ಲೂ ಹಗುರ ಮಳೆಯಾಗಬಹುದು.

ಅಕ್ವಾನ್ ಚಂಡಮಾರುತವು ತೀವ್ರಗೊಂಡು ನವೆಂಬರ್ 20ರ ಮಧ್ಯಾಹ್ನ ನೆಲ್ಲೂರು ಮತ್ತು ತುನಿ ನಡುವಿನ ಆಂಧ್ರಪ್ರದೇಶ ಕರಾವಳಿಯನ್ನು ದಾಟುವ ಸಾಧ್ಯತೆಯಿದೆ. ಈ ವೇಳೆ ಗಂಟೆಗೆ 120ರಿಂದ 130 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದ್ದು, ಗರಿಷ್ಠ ವೇಗ 145 ಕಿ.ಮೀ. ತಲುಪಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.


