ಬೆಂಗಳೂರಲ್ಲಿ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ 10 ಕೋಟಿ ಮೌಲ್ಯದ MDMA ಡ್ರಗ್ಸ್ ಜಪ್ತಿ

ಬೆಂಗಳೂರು: ನಗರದಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. 10 ಕೋಟಿ ರೂಪಾಯಿ ಮೌಲ್ಯದ ಎಂಡಿಎಂಎ ಡ್ರಗ್ಸ್ ಜಪ್ತಿ ಮಾಡಿದ್ದಾರೆ.

ಬೆಂಗಳೂರಲ್ಲಿ ಸಿಸಿಬಿ ಹಾಗೂ ಚಿಕ್ಕಜಾಲ ಠಾಣೆಯ ಪೊಲೀಸರಿಂದ ಜಂಟಿ ಕಾರ್ಯಾಚರಣೆ ನಡೆಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ವಿದೇಶಿ ಮಹಿಳೆ ಪ್ರಿನ್ನೆಸ್ ಬಂಧಿಸಲಾಗಿದೆ.

ಬಂಧಿತ ಮಹಿಳೆಯಿಂದ 10 ಕೋಟಿ ಮೌಲ್ಯದ 5.325 ಕೆಜಿ ಎಂಜಿಎಂಎ ಜಪ್ತಿ ಮಾಡಲಾಗಿದೆ. ಇದರ ಮೌಲ್ಯ 10 ಕೋಟಿ ರೂಪಾಯಿ ಎಂಬುದಾಗಿ ಅಂದಾಜಿಸಲಾಗಿದೆ.