ಬೆಂಗಳೂರು: ಕನ್ನಡ ನಟಿ ರನ್ಯಾ ರಾವ್ ತಮ್ಮ ವಿಚಾರಣೆಯ ಸಮಯದಲ್ಲಿ ಚಿನ್ನ ಖರೀದಿಸಲು ಹಣವನ್ನು ಹವಾಲಾ ವಹಿವಾಟಿನ ಮೂಲಕ ಕಳುಹಿಸಲಾಗಿದೆ ಎಂದು ಒಪ್ಪಿಕೊಂಡಿದ್ದಾರೆ ಎಂದು ಕಂದಾಯ ಗುಪ್ತಚರ ನಿರ್ದೇಶನಾಲಯ ಮಂಗಳವಾರ ನ್ಯಾಯಾಲಯಕ್ಕೆ ತಿಳಿಸಿದೆ.
ರನ್ಯಾ ರಾವ್ಗೆ ಹವಾಲಾ ಮೂಲಕ ಹಣವನ್ನು ಕಳುಹಿಸಲಾಗಿದೆ. ಅವರು ಅದನ್ನು ಒಪ್ಪಿಕೊಂಡಿದ್ದಾರೆ ಎಂದು ಕಂದಾಯ ಗುಪ್ತಚರ ನಿರ್ದೇಶನಾಲಯದ (DRI) ಹಿರಿಯ ವಕೀಲ ಮಧು ರಾವ್ ಹೇಳಿದ್ದಾರೆ.
ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ರಾವ್ ಅವರ ಜಾಮೀನು ಅರ್ಜಿ ವಿಚಾರಣೆ ಬೆಂಗಳೂರಿನ 64 ನೇ CCH ಸೆಷನ್ಸ್ ನ್ಯಾಯಾಲಯದಲ್ಲಿ ನಡೆಸಲಾಯಿತು. ವಾದ ಪ್ರತಿವಾದ ಆಲಿಸಿದಂತ ನ್ಯಾಯಾಲಯವು ಮಾರ್ಚ್.27ಕ್ಕೆ ಆದೇಶ ಕಾಯ್ದಿರಿಸಿದೆ.



