‘ಅನ್ನಸೇವೆ’ ಮೊಬೈಲ್ ಆ್ಯಪ್ ಬಿಡುಗಡೆ: ಇನ್ಮುಂದೆ ಮನೆಯಲ್ಲೇ e-KYC | Annaseve

Annaseve mobile app launched e-KYC from home now possible

ಬೆಂಗಳೂರು: ರಾಜ್ಯದ ಅನ್ನಭಾಗ್ಯ(Anna Bhagya) ಸೇರಿದಂತೆ ಸಾರ್ವಜನಿಕ ವಿತರಣಾ ಯೋಜನೆಯ ಫಲಾನುಭವಿಗಳು ಇನ್ಮುಂದೆ ನ್ಯಾಯಬೆಲೆ ಅಂಗಡಿಗಳ ಎದುರು ಸರತಿ ಸಾಲಿನಲ್ಲಿ ನಿಲ್ಲದೆ ಮನೆಯಲ್ಲೇ ಕುಳಿತು ಮೊಬೈಲ್(Mobile) ಮೂಲಕ e-KYC ಪೂರ್ಣಗೊಳಿಸಲು ನೂತನ ‘ಅನ್ನಸೇವೆ’ ಆ್ಯಪ್ (Annaseve App) ನೆರವಾಗಲಿದೆ.

ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ಹಾಗೂ ಇ-ಆಡಳಿತ ಇಲಾಖೆಯ ಸಹಯೋಗದಲ್ಲಿ ಅಭಿವೃದ್ಧಿಪಡಿಸಿರುವ ಈ ಆ್ಯಪ್ ಅನ್ನು ಆಹಾರ ಸಚಿವ ರಿಜ್ವಾನ್ ಅರ್ಷದ್ ಬಿಡುಗಡೆಗೊಳಿಸಿದ್ದು, ಅಕ್ಟೋಬರ್ 14ರಿಂದ ರಾಜ್ಯದ ಎಲ್ಲ ಜಿಲ್ಲೆಗಳ ಸಾರ್ವಜನಿಕರಿಗೆ ಲಭ್ಯವಾಗಲಿದೆ.

ಆರಂಭಿಕ ಹಂತದಲ್ಲಿ ಎಂಟು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಯಶಸ್ವಿ ಕಂಡಿರುವ ಈ ಸೌಲಭ್ಯವನ್ನು ಗೂಗಲ್ ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಂಡು, ಮುಖ ಗುರುತಿಸುವಿಕೆ (Face Authentication) ತಂತ್ರಜ್ಞಾನದ ಮೂಲಕ ಸರಳವಾಗಿ ಬಳಸಬಹುದು.

ಹೊರ ಊರುಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಈ ಡಿಜಿಟಲ್ ವ್ಯವಸ್ಥೆ ಹೆಚ್ಚು ಅನುಕೂಲವಾಗಲಿದ್ದು, ಈಗಾಗಲೇ ಒಂದು ವರ್ಷದ ಹಿಂದೆ e-KYC ಮಾಡಿಸಿದವರೂ ನಿಯಮಾನುಸಾರ ಮತ್ತೊಮ್ಮೆ ನವೀಕರಿಸಿಕೊಳ್ಳುವುದು ಕಡ್ಡಾಯವಾಗಿದೆ.

ಪಡಿತರ ವಿತರಣೆಯಲ್ಲಿ ವ್ಯತ್ಯಯವಾಗದಂತೆ ತಡೆಯಲು ಬಾಕಿ ಉಳಿದಿರುವ ಎಲ್ಲ ಫಲಾನುಭವಿಗಳು ಅಕ್ಟೋಬರ್ 20ರ ನಿಗದಿತ ಗಡುವಿನೊಳಗೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಆಹಾರ ಇಲಾಖೆ ಮನವಿ ಮಾಡಿದೆ.