ಚಾಮರಾಜನಗರ: ಓವರ್ ಟೇಕ್ ವೇಳೆಯಲ್ಲಿ ಮತ್ತೊಂದು ಕಾರಿಗೆ, ಕಾರೊಂದು ಡಿಕ್ಕಿ ಹೊಡೆದ ಪರಿಣಾಮ, ಐವರಿಗೆ ಗಂಭೀರ ಗಾಯವಾಗಿರುವಂತ ಘಟನೆಯು ಚಾಮರಾಜನಗರದಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಮಧುವನಹಳ್ಳಿಯ ಬೈಪಾಸಿನ ಔಟರ್ ರಿಂಗ್ ರಸ್ತೆಯಲ್ಲಿ ಓವರ್ ಟೇಕ್ ವೇಳೆ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಎರಡೂ ಕಾರಿನಲ್ಲಿದ್ದಂತ ಇಬ್ಬರು ಮಕ್ಕಳು ಸೇರಿದಂತೆ ಐವರು ಗಾಯಗೊಂಡಿದ್ದಾರೆ.
ಐ10 ಕಾರಿಗೆ ಮಾರುತಿ ಸುಜುಕಿ ಸ್ವಿಫ್ಟ್ ಕಾರು ಓವರ್ ಟೇಕ್ ಸಂದರ್ಭದಲ್ಲಿ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಕಾಂತರಾಜ್, ಸೋಮಣ್ಣ, ಮೂರ್ತಿ, ಖುಷಿ ಹಾಗೂ ಸ್ವಾತಿ ಎಂಬುವರಿಗೆ ಗಾಯವಾಗಿದೆ. ಗಾಯಾಳುಗಳನ್ನು ಕೊಳ್ಳೇಗಾಲದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.




