ಬೆಂಗಳೂರು: ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಉಂಟಾದಂತ ಜಗಳ ಬೆಂಗಳೂರಲ್ಲಿ ಕೊಲೆಯಲ್ಲಿ ಅಂತ್ಯವಾಗಿರುವಂತ ಘಟನೆ ನಡೆದಿದೆ. ಜಾರ್ಖಂಡ್ ಮೂಲದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಬೆಂಗಳೂರಲ್ಲಿ ಕುಡಿದ ಮತ್ತಿನಲ್ಲಿ ಗಲಾಟೆಯನ್ನು ಸ್ನೇಹಿತರಿಬ್ಬರು ಮಾಡಿಕೊಂಡಿದ್ದಾರೆ. ಈ ಗಲಾಟೆ ತಾರಕಕ್ಕೆ ಏರಿದಂತ ಸಂದರ್ಭದಲ್ಲಿ ಬೆಂಗಳೂರಿನ ಸೀಗೇನಹಳ್ಳಿಯಲ್ಲಿ ಜಾರ್ಖಂಡ್ ನ ಪವನ್(40) ಎಂಬಾತನನ್ನು ಹತ್ಯೆ ಮಾಡಲಾಗಿದೆ.
ಮದ್ಯ ಸೇವನೆ ವೇಳೆ ಮಾತಿಗೆ ಮಾತು ಬೆಳೆದು ಗಣೇಶ್ ಮತ್ತು ಪವನ್ ನಡುವೆ ಗಲಾಟೆಯಾಗಿತ್ತು. ಈ ಗಲಾಟೆ ತಾರಕ್ಕೇರಿದಂತ ಸಂದರ್ಭದಲ್ಲಿ ಪವನ್ ಎದೆಗೆ ಗಣೇಶ್ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಆರೋಪಿ ಗಣೇಶ್ ನನ್ನು ಕಾಡುಗೋಡಿ ಪೊಲೀಸರು ಬಂಧಿಸಿದ್ದಾರೆ.




