ಬೆಂಗಳೂರು: ಏಪ್ರಿಲ್.6, 2025ರಂದು ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ.
ಇಂದು ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದು, ದಿನಾಂಕ: 06-04-2025 ಭಾನುವಾರದಂದು “ಶ್ರೀರಾಮ ನವಮಿ ಹಬ್ಬ”ದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.




