ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಉಂಟಾಗಿ 11 ಆರ್ ಸಿ ಬಿ ಅಭಿಮಾನಿಗಳು ಸಾವನ್ನಪ್ಪಿದ್ದರು. ಈ ದುರಂತವನ್ನು ರಾಜ್ಯ ಸರ್ಕಾರವು ಸಿಐಡಿ ತನಿಖೆಗೆ ವರ್ಗಾವಣೆ ಮಾಡಿ ಆದೇಶಿಸಿದೆ.
18 ವರ್ಷಗಳ ಬಳಿಕ ಆರ್ ಸಿ ಬಿ ಐಪಿಎಲ್ ಕಪ್ ಗೆದ್ದ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಢಾಂಗಣದಲ್ಲಿ ಆಯೋಜಿಸಲಾಗಿತ್ತು. ಈ ಸಂಭ್ರಮಾಚರಣೆ ವೀಕ್ಷಣೆಗೆ 2 ರಿಂದ 3 ಲಕ್ಷ ಅಭಿಮಾನಿಗಳು ಆಗಮಿಸಿದ್ದರು. ಇದರಿಂದಾಗಿ ನೂಕು ನುಗ್ಗಲು ಉಂಟಾಗಿ 11 ಆರ್ ಸಿ ಬಿ ಅಭಿಮಾನಿಗಳು ಸಾವನ್ನಪ್ಪಿ, ದುರಂತ ಸಂಭವಿಸಿತ್ತು.
ಈ ಪ್ರಕರಣವನ್ನು ಈಗಾಗಲೇ ರಾಜ್ಯ ಸರ್ಕಾರ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದೆ. ಇದರ ಜೊತೆಗೆ ರಾಜ್ಯ ಸರ್ಕಾರವು ಪ್ರಕರಣವನ್ನು ಸಿಐಡಿ ತನಿಖೆಗೆ ವರ್ಗಾವಣೆ ಮಾಡಿ ಆದೇಶಿಸಿದೆ.




