ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಂತ ಕಾಲ್ತುಳಿತ ದುರಂತದ ಬಗ್ಗೆ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ವಿರುದ್ಧವೂ ದೂರು ದಾಖಲಾಗಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಆರ್ ಸಿ ಬಿ ವಿಜಯೋತ್ಸವ ಆಚರಣೆಯ ವೇಳೆ ನೂಕು ನುಗ್ಗಲು ಉಂಟಾಗಿ 11 ಅಭಿಮಾನಿಗಳು ಸಾವನ್ನಪ್ಪಿದ್ದರು. ಈ ಪ್ರಕರಣವನ್ನು ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಅಲ್ಲದೇ ಸಿಐಡಿಗೆ ಕೇಸ್ ವರ್ಗಾವಣೆ ಕೂಡ ಮಾಡಿದೆ.
ಇನ್ನೂ ಆರ್ ಸಿ ಬಿ, ಡಿಎನ್ಎ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದರು. ನಾಲ್ವರು ಬಂಧಿಸಿದ್ದರು. ಅವರಿಗೆ ಜೂನ್.19ರವರೆಗೆ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಮತ್ತೆ ಮೂವರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.
ಈ ಎಲ್ಲದರ ನಡುವೆ ಕ್ರಿಕೆಟಿಗ ವಿರಾಟ್ ಕೊಹ್ಲಿ ವಿರುದ್ಧ ಕ್ರಮ ಕೈಗೊಳ್ಳುವಂತೆ ನೈಜ ಹೋರಾಟಗಾರರ ವೇದಿಕೆಯ ಹೆಚ್.ಎಂ ವೆಂಕಟೇಶ್ ಎಂಬುವರು ಕಬ್ಬನ್ ಪಾರ್ಕ್ ಠಾಣೆಯ ಪೊಲೀಸರಿಗೆ ದೂರು ನೀಡಲಾಗಿತ್ತು. ಆದರೇ ಕೆಲ ಗಂಟೆಗಳವರೆಗೆ ವಿರಾಟ್ ಕೊಹ್ಲಿ ವಿರುದ್ಧದ ದೂರು ಪಡೆಯಲು ಪೊಲೀಸರು ಹಿಂದೇಟು ಹಾಕಿದ್ದರು. ಅಂತಿಮವಾಗಿ ನೈಜ ಹೋರಾಟಗಾರರ ವೇದಿಕೆಯಿಂದ ನೀಡಿದಂತ ದೂರು ಪಡೆದಿರುವಂತ ಕಬ್ಬನ್ ಪಾರ್ಕ್ ಠಾಣೆಯ ಪೊಲೀಸರು, ಈಗಾಗಲೇ ಆರ್ ಸಿ ಬಿ ವಿರುದ್ಧ ದಾಖಲಾಗಿರುವಂತ ಎಫ್ಐಆರ್ ಜೊತೆಗೆ ಇದನ್ನು ಪರಿಗಣಿಸುವುದಾಗಿ ಹಿಂಬರಹದಲ್ಲಿ ತಿಳಿಸಿದ್ದಾರೆ.




