ಬಿಜೆಪಿಯಿಂದ ‘ಶಾಸಕ ಬಸನಗೌಡ ಪಾಟೀಲ್ ಯತ್ನಾಳ್’ 6 ವರ್ಷ ಉಚ್ಚಾಟನೆ

ನವದೆಹಲಿ: ಬಿಜೆಪಿ ವಿರುದ್ಧ ಗುಡುಗುತ್ತಿದ್ದಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಗ್ ಶಾಕ್ ನೀಡಲಾಗಿದೆ. ಬಿಜೆಪಿ ಪಕ್ಷದಿಂದ 6 ವರ್ಷಗಳ ಉಚ್ಛಾಟನೆ ಮಾಡಲಾಗಿದೆ.

ಈ ಸಂಬಂಧ ಕೇಂದ್ರ ಶಿಸ್ತು ಸಮಿತಿ ಸದಸ್ಯ ಕಾರ್ಯದರ್ಶಿ ಓಂಪಾಠಕ್ ಅವರು ಮಾಹಿತಿ ನೀಡಿದ್ದಾರೆ. ಬಿಜೆಪಿ ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಆರೋಪ ಸಂಬಂಧ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಆರು ವರ್ಷಗಳ ಅವಧಿಗೆ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂಬುದಾಗಿ ಖಚಿತ ಪಡಿಸಿದ್ದಾರೆ.

ಅಂದಹಾಗೇ ಕೆಲ ದಿನಗಳ ಹಿಂದೆ ಬಿಜೆಪಿ ಶಾಸಕ ಯತ್ನಾಳ್ ಗೆ ಕೇಂದ್ರ ಶಿಸ್ತು ಸಮಿತಿಯಿಂದ ನೋಟಿಸ್ ನೀಡಲಾಗಿತ್ತು. ಆದರೇ ಇದಕ್ಕೆ ಸರಿಯಾಗಿ ಉತ್ತರ ನೀಡಿರಲಿಲ್ಲ. ಎರಡು ಬಾರಿ ನೋಟಿಸ್ ನೀಡಿದರೂ ಅದೇ ಉತ್ತರ ಕೊಟ್ಟಂತ ಶಾಸಕ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟಿಸಿ ಆದೇಶಿಸಲಾಗಿದೆ.