‘ಗೃಹಲಕ್ಷ್ಮಿ’ ಹಣ ಕೂಡಿಟ್ಟು ಕೃಷಿ ಭೂಮಿಗೆ ಬೋರ್‌ವೆಲ್ ಕೊರೆಸಿದ ಅತ್ತೆ – ಸೊಸೆ; ಸುದ್ದಿ ಕೇಳಿ ಖುಷಿಪಟ್ಟ ಸಿಎಂ

ಬೆಂಗಳೂರು: ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯು ಒಂದಿಲ್ಲೊಂದು ವಿಚಾರಗಳಿಂದಾಗಿ ಸುದ್ದಿಯ ಮುನ್ನೆಲೆಯಲ್ಲಿರುತ್ತದೆ. ಇದೀಗ ಗೃಹಲಕ್ಷ್ಮಿ ಯೋಜನೆಯ ಹಣದಲ್ಲಿ ಬೋರ್‌ವೆಲ್ ಕೊರೆಸಿ ಬದುಕು ಕಟ್ಟಿಕೊಂಡ ಅತ್ತೆ – ಸೊಸೆಯ ಸಾಹಸಗಾಥೆ ಗಮನಸೆಳೆದಿದೆ.

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಮಾಲದಾರ ಓಣಿಯ ಅತ್ತೆ ಮಾಬುಬೀ ಹಾಗೂ ಸೊಸೆ ರೋಷನ್ ಬೇಗಂ ಪ್ರತಿ ತಿಂಗಳು ತಮಗೆ ಬಂದ ಗೃಹಲಕ್ಷ್ಮಿ ಹಣ ಕೂಡಿಟ್ಟು ಕೃಷಿ ಭೂಮಿಗೆ ಬೋರ್‌ವೆಲ್ ಕೊರೆಸಿ, ಸಮೃದ್ಧ ನೀರು ಪಡೆದಿದ್ದಾರೆ.

ಈ ಬಗ್ಗೆ ಸಂತಸ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ‘ನಮ್ಮ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಮೂಲಕ ಪಡೆದ ಹಣದಲ್ಲಿ ಬೋರ್‌ವೆಲ್ ಕೊರೆಸಿ ಬದುಕು ಕಟ್ಟಿಕೊಂಡ ಅತ್ತೆ – ಸೊಸೆಯ ಮಾತುಗಳು ಕೇಳಿ ಖುಷಿಯಾಯಿತು’ ಎಂದಿದ್ದಾರೆ.

ನಾಡಿನ ಬಡಕುಟುಂಬಗಳಿಗೆ ಆರ್ಥಿಕ ಶಕ್ತಿ ತುಂಬಿ, ಅವರನ್ನು ಸ್ವಾವಲಂಬಿಗಳನ್ನಾಗಿಸುವ ಈ ಯೋಜನೆಯ ಉದ್ದೇಶ ಯಶಸ್ವಿಯಾಗಿ ಈಡೇರುತ್ತಿರುವುದು ಯೋಜನೆಯನ್ನು ಜಾರಿಗೆ ಕೊಟ್ಟ ನನ್ನಲ್ಲಿ ಸಂತೃಪ್ತಭಾವ ಮೂಡಿಸಿದೆ ಎಂದಿರುವ ಸಿಎಂ, ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಅತ್ತೆ – ಸೊಸೆಯ ನಡುವೆ ಜಗಳ ಆರಂಭವಾಗುತ್ತದೆ, ಸಂಸಾರಗಳು ಒಡೆಯುತ್ತವೆ ಎಂದು ಟೀಕಿಸಿದ ಜನರಿಗೆ ಬಾರಿಸಿದ ತಪರಾಕಿ ಇದು. ಬೆಳಕಿಗೆ ಬಾರದ ಇಂತಹ ಇನ್ನೂ ಸಾವಿರಾರು ಯಶೋಗಾಥೆಗಳಿವೆ, ಗೃಹಲಕ್ಷ್ಮಿ ನಾಡಿನ ತಾಯಂದಿರ ಬಾಳಿಗೆ ಅಕ್ಷರಶಃ ಭಾಗ್ಯಲಕ್ಷ್ಮಿಯಾಗಿದೆ ಎನ್ನುವುದರಲ್ಲಿ ಯಾವ ಸಂಶಯವೂ ಇಲ್ಲ ಎಂದಿದ್ದಾರೆ.