ಮಹಾ ಕುಂಭಮೇಳದಲ್ಲಿ ಭಾಗವಹಿಸಿದ ಬಿವೈ ವಿಜಯೇಂದ್ರ: ಪ್ರಯಾಗ್ ರಾಜ್ ನಲ್ಲಿ ಪುಣ್ಯಸ್ನಾನ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಇಂದು ಪ್ರಯಾಗ್ ರಾಜ್‍ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭಾಗವಹಿಸಿದ್ದರು.

ಇಡೀ ವಿಶ್ವದ ಧರ್ಮಾತೀತ ಆಸ್ತಿಕರನ್ನು ಸೂಜಿಗಲ್ಲಿನಂತೆ ಬರಸೆಳೆದು ಜಾಗತಿಕ ಇತಿಹಾಸ ಬರೆಯುತ್ತಿರುವ 144 ವರ್ಷಗಳ ನಂತರ ನಡೆಯುತ್ತಿರುವ ಪ್ರಯಾಗ್ ರಾಜ್ ನ ಕುಂಭಮೇಳದ ತ್ರಿವೇಣಿ ಸಂಗಮದಲ್ಲಿ ಮಿಂದದ್ದೆ. ಅದು ಪುನೀತ ಭಾವ ಮೂಡಿಸಿತು ಎಂದು ಅವರು ತಿಳಿಸಿದ್ದಾರೆ.

ಜಾಗತಿಕ ಶಾಂತಿಗಾಗಿ, ದೇಶದ ಕಲ್ಯಾಣಕ್ಕಾಗಿ, ಕರುನಾಡ ಜನರ ಒಳಿತಿಗಾಗಿ ಪ್ರಾರ್ಥಿಸಿದೆ. ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಈ ಕುಂಭಮೇಳ ಫೆಬ್ರವರಿ 28ರ ಕೊನೆಯ ದಿನದವರೆಗೂ ಹರಿದು ಬರುವ ಭಕ್ತ ಸಾಗರಕ್ಕೆ ಪುಣ್ಯ ಲಭಿಸಲಿ, ಯಾವುದೇ ಅವಘಡಗಳು ಸಂಭವಿಸದಿರಲೆಂದು ಭಗವಂತನಲ್ಲಿ ಪ್ರಾರ್ಥಿಸಿದ್ದಾಗಿ ತಿಳಿಸಿದ್ದಾರೆ.

ಪರಮಪೂಜ್ಯ ಋಷಿ ಮುನಿಗಳ ಆಶೀರ್ವಾದ ನವ ಚೈತನ್ಯ ಮೂಡಿಸಿದ್ದಾಗಿ ಅವರು ಹೇಳಿದ್ದಾರೆ.