BCCI ಆಯ್ಕೆ ಸಮಿತಿಯ ನೂತನ ಅಧ್ಯಕ್ಷರಾಗಿ ಪ್ರಗ್ಯಾನ್ ಓಜಾ ನೇಮಕ, ಸಮಿತಿಗೆ ರಮೇಶ್ ಪೊವಾರ್ ಸೇರ್ಪಡೆ | Pragyan Ojha

ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಭಾರತ ಪುರುಷರ ಹಿರಿಯರ ಕ್ರಿಕೆಟ್ ಆಯ್ಕೆ ಸಮಿತಿಯನ್ನು ಮಹತ್ವದ ಬದಲಾವಣೆಗಳೊಂದಿಗೆ ಪುನಾರಚಿಸಿದೆ. ಅಜಿತ್ ಅಗರ್ಕರ್ ಅವರ ಅಧಿಕಾರಾವಧಿ ಮುಕ್ತಾಯಗೊಂಡ ಬೆನ್ನಲ್ಲೇ, ಮಾಜಿ ಸ್ಪಿನ್ನರ್ ಪ್ರಗ್ಯಾನ್ ಓಜಾ(Pragyan Ojha) ಅವರನ್ನು ಸಮಿತಿಯ ನೂತನ ಮುಖ್ಯಸ್ಥರನ್ನಾಗಿ (ಚೇರ್‌ಪರ್ಸನ್) ಬಡ್ತಿ ನೀಡಲಾಗಿದ್ದು, ಖಾಲಿಯಿದ್ದ ಸ್ಥಾನಕ್ಕೆ ಮಾಜಿ ಆಟಗಾರ ಹಾಗೂ ಕೋಚ್ ರಮೇಶ್ ಪೊವಾರ್(Ramesh Powar) ಅವರನ್ನು ನೂತನ ಆಯ್ಕೆಗಾರರನ್ನಾಗಿ ನೇಮಕ ಮಾಡಲಾಗಿದೆ.

ಏಷ್ಯನ್ ಪ್ಯಾರಾ ಗೇಮ್ಸ್: ಲಾಂಗ್ ಜಂಪ್ ನಲ್ಲಿ ಚಿನ್ನ ಗೆದ್ದ ಭಾರತದ ನಿಶಾದ್ ಕುಮಾರ್ | Nishad Kumar

ನವದೆಹಲಿ: ಏಷ್ಯನ್ ಪ್ಯಾರಾ ಗೇಮ್ಸ್ 2026ರಲ್ಲಿ ಭಾರತದ ತಾರಾ ಪ್ಯಾರಾ ಅಥ್ಲೀಟ್ ನಿಶಾದ್ ಕುಮಾರ್(Nishad Kumar) ಐತಿಹಾಸಿಕ ಸಾಧನೆ ಮಾಡಿದ್ದಾರೆ. ಪುರುಷರ ಟಿ47 (T47) ವಿಭಾಗದ ಲಾಂಗ್ ಜಂಪ್ ಸ್ಪರ್ಧೆಯಲ್ಲಿ ಅಮೋಘ ಪ್ರದರ್ಶನ ನೀಡಿದ ಅವರು, 7.11 ಮೀಟರ್ ದೂರ ಜಿಗಿಯುವ ಮೂಲಕ ಬಂಗಾರದ ಪದಕಕ್ಕೆ ಕೊರಳೊಡ್ಡಿದ್ದಾರೆ.

ಏಷ್ಯನ್ ಪ್ಯಾರಾ ಗೇಮ್ಸ್: ಕ್ರೀಡಾಪಟುಗಳ ಧೈರ್ಯ, ಸಮರ್ಪಣೆ ಮತ್ತು ಛಲಕ್ಕೆ ಪ್ರಧಾನಿ ಮೆಚ್ಚುಗೆ

ನವದೆಹಲಿ: ಜಪಾನ್‌ನ ಐಚಿ–ನಗೋಯಾದಲ್ಲಿ 2026ರ ಏಷ್ಯನ್ ಪ್ಯಾರಾ ಗೇಮ್ಸ್ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಭಾರತೀಯ ಕ್ರೀಡಾಪಟುಗಳಿಗೆ ಶುಭಾಶಯ ಕೋರಿದ್ದಾರೆ. ಸಾಮಾಜಿಕ ಜಾಲತಾಣ…

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ರೋಚಕ ಗೆಲುವು: ಬ್ಯಾಟಿಂಗ್ ಪ್ರದರ್ಶನ ಬಗ್ಗೆ ಸ್ಮೃತಿ ಮಂಧಾನಾ 

ರಾಯ್ಪುರ: ಜಿಂಬಾಬ್ವೆ ವಿರುದ್ಧದ ಮೊದಲ ಮಹಿಳಾ ಟಿ20 ಪಂದ್ಯದಲ್ಲಿ ಭಾರತ ನಾಲ್ಕು ವಿಕೆಟ್‌ಗಳ ಗೆಲುವು ದಾಖಲಿಸಿದೆ. ಶುಕ್ರವಾರ ನಡೆದ ಪಂದ್ಯದಲ್ಲಿ 115 ರನ್‌ಗಳ ಗುರಿ ಬೆನ್ನಟ್ಟಿದ ಭಾರತ,…

ಏಷ್ಯನ್ ಗೇಮ್ಸ್ 2026ರ 85 ಪದಕಗಳ ಸಾಧನೆಗೆ ಮೋದಿ ಮೆಚ್ಚುಗೆ; 2036ರ ಒಲಿಂಪಿಕ್ಸ್ ಆತಿಥ್ಯದ ಪ್ರಸ್ತಾಪ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಏಷ್ಯನ್ ಗೇಮ್ಸ್ 2026ರ ಭಾರತೀಯ ತಂಡದ ಕ್ರೀಡಾಪಟುಗಳು, ತರಬೇತುದಾರರು, ಸಹಾಯಕ ಸಿಬ್ಬಂದಿ ಹಾಗೂ ಅವರ ಕುಟುಂಬ ಸದಸ್ಯರೊಂದಿಗೆ ಸಂವಾದ…

ಏಷ್ಯನ್ ಗೇಮ್ಸ್‌ನಲ್ಲಿ ಸೇನಾ ಕ್ರೀಡಾಪಟುಗಳ 20 ಪದಕಗಳ ಸಾಧನೆಗೆ ಸೇನಾ ಮುಖ್ಯಸ್ಥರ ಮೆಚ್ಚುಗೆ

ನವದೆಹಲಿ: ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಸೇನಾ ಕ್ರೀಡಾಪಟುಗಳು 20 ಪದಕಗಳನ್ನು ಗೆದ್ದಿರುವ ಸಾಧನೆಗೆ ಸೇನಾ ಮುಖ್ಯಸ್ಥ ಜನರಲ್ ಧೀರಜ್ ಸೇಠ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 2028ರ ಲಾಸ್ ಏಂಜಲೀಸ್…

ರಾಜ್ಯಮಟ್ಟದ ಮ್ಯಾರಥಾನ್‌ನಲ್ಲಿ ಸೃಜನ್‌ಗೆ ಚಿನ್ನ; ರಾಷ್ಟ್ರಮಟ್ಟಕ್ಕೆ ಆಯ್ಕೆ

ಚನ್ನರಾಯಪಟ್ಟಣ: ಮೈಸೂರು ವಿಶ್ವವಿದ್ಯಾಲಯದ ವತಿಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ 21 ಕಿ.ಮೀ. ಮ್ಯಾರಥಾನ್ ಓಟದಲ್ಲಿ ಪ್ರಥಮ ಸ್ಥಾನ ಗಳಿಸಿದ ಮೈಸೂರಿನ ಯುವರಾಜ ಕಾಲೇಜಿನ ಬಿ.ಎಸ್ಸಿ.…

ಬೆಂಗಳೂರಿನಲ್ಲಿ ಅ. 20ರಿಂದ ಫಿಬಾ ಮಹಿಳಾ ಬಾಸ್ಕೆಟ್‌ಬಾಲ್ ಲೀಗ್ ಏಷ್ಯಾ–2026

ಬೆಂಗಳೂರು: ನಗರದ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಅಕ್ಟೋಬರ್ 20ರಿಂದ 25ರವರೆಗೆ ನಡೆಯಲಿರುವ ಪ್ರತಿಷ್ಠಿತ ‘ಫಿಬಾ ಮಹಿಳಾ ಬಾಸ್ಕೆಟ್‌ಬಾಲ್ ಲೀಗ್ ಏಷ್ಯಾ–2026’ ಅಂತಾರಾಷ್ಟ್ರೀಯ ಚಾಂಪಿಯನ್‌ಶಿಪ್‌ನ ಪೂರ್ವಸಿದ್ಧತೆಗಳನ್ನು ಉಪಮುಖ್ಯಮಂತ್ರಿ…

ಮೈಸೂರಿನಲ್ಲಿ ‘ಸಿಎಂ ಕಪ್ 2026’ ಕ್ರೀಡಾಕೂಟ: ಏಷ್ಯನ್ ಗೇಮ್ಸ್‌, ಕಾಮನ್‌ವೆಲ್ತ್ ಗೇಮ್ಸ್ ಪದಕ ವಿಜೇತರಿಗೆ ಸನ್ಮಾನ

ಮೈಸೂರು: ನಾಡಹಬ್ಬ ದಸರಾ ಅಂಗವಾಗಿ ಮೈಸೂರಿನ ಚಾಮುಂಡಿ ವಿಹಾರ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ‘ಸಿಎಂ ಕಪ್ 2026’ ಕ್ರೀಡಾಕೂಟಕ್ಕೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಚಾಲನೆ…

ಮೈಸೂರಿನಲ್ಲಿ ‘ಸಿಎಂ ಕಪ್ 2026’ ದಸರಾ ಕ್ರೀಡಾಕೂಟಕ್ಕೆ ಚಾಲನೆ

ಮೈಸೂರು: ದಸರಾ ಉತ್ಸವದ ಅಂಗವಾಗಿ ಮೈಸೂರಿನ ಚಾಮುಂಡಿ ವಿಹಾರ್ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ದಸರಾ ಕ್ರೀಡಾಕೂಟ ‘ಸಿಎಂ ಕಪ್ 2026’ಕ್ಕೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್…