ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ನೋಂದಾಯಿಸಿಕೊಳ್ಳುವುದಕ್ಕೆ ಮತ್ತೆ ಅವಧಿಯನ್ನು ವಿಸ್ತರಿಸಲಾಗಿದೆ. ಈ ಮೂಲಕ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ.
ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು, 2025 ನೇ ಸಾಲಿನ ಮಾರ್ಚ್ ಮಾಹೆಯಲ್ಲಿ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಪುನರಾವರ್ತಿತ ಅಭ್ಯರ್ಥಿಗಳು, ಫಲಿತಾಂಶ ಉತ್ತಮಪಡಿಸಿಕೊಳ್ಳುವ ಅಭ್ಯರ್ಥಿಗಳು ಹಾಗೂ ಖಾಸಗಿ ಅಭ್ಯರ್ಥಿಗಳು ನೋಂದಾಯಿಸಿಕೊಳ್ಳಲು ದಿನಾಂಕ:21-12-2024 ರಿಂದ 31-12-2024 ರವರೆಗೆ “ವಿಶೇಷ ದಂಡ ಶುಲ್ಕ” ವನ್ನು ಸಂಬಂಧಿಸಿದ ಕಾಲೇಜುಗಳಲ್ಲಿ ಪಾವತಿಸಲು ಅವಕಾಶವನ್ನು ಕಲ್ಪಿಸಿದೆ ಎಂದು ತಿಳಿಸಿದ್ದಾರೆ.
ಈಗಾಗಲೇ ಹಲವು ಬಾರಿ ವಿಸ್ತರಿಸಿರುವುದರಿಂದ ಪರೀಕ್ಷಾ ಶುಲ್ಕ ಪಾವತಿಸುವ ದಿನಾಂಕವನ್ನು ಯಾವುದೇ ಕಾರಣಕ್ಕೂ ಪುನಃ ವಿಸ್ತರಿಸಲಾಗುವುದಿಲ್ಲ. ಇದು ಅಂತಿಮ ಅವಕಾಶವಾಗಿದ್ದು, ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯುವಂತೆ ಪ್ರಾಂಶುಪಾಲರು ಕ್ರಮ ವಹಿಸುವುದು. ಈ ಸಂಬಂಧ ವಿದ್ಯಾರ್ಥಿಗಳು ಮಂಡಲಿಯ ಜಾಲತಾಣ https://kseab.karnataka.gov.in ರಲ್ಲಿ ಅಪ್ಲೋಡ್ ಮಾಡಲಾಗಿರುವ “ಸುತ್ತೋಲೆ” ಯಲ್ಲಿ ಹೆಚ್ಚಿನ ವಿವರಗಳನ್ನು ವೀಕ್ಷಿಸಬಹುದಾಗಿದೆ ಎಂದಿದ್ದಾರೆ.




