ಪತ್ನಿ ಪಾರ್ವತಿಗೆ ಇಡಿ ನೋಟಿಸ್ ಬಗ್ಗೆ ಸಿಎಂ ಸಿದ್ಧರಾಮಯ್ಯ ಹೇಳಿದ್ದೇನು ಗೊತ್ತಾ?

ಬೆಂಗಳೂರು: ಮುಡಾ ಹಗರಣ ಸಂಬಂದ ಇಡಿಯಿಂದ ವಿಚಾರಣೆಗೆ ಹಾಜರಾಗುವಂತೆ ಸಿದ್ಧರಾಮಯ್ಯ ಪತ್ನಿ ಪಾರ್ವತಿಗೆ ನೋಟಿಸ್ ನೀಡಲಾಗಿತ್ತು. ಈ ಬಗ್ಗೆ ಸಿಎಂ ಸಿದ್ಧರಾಮಯ್ಯ ಹೇಳಿದ್ದೇನು ಅಂತ ಮುಂದೆ ಓದಿ.

ಇಂದು ವಿಧಾನಸೌಧದದ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಿಬಿಐ ತನಿಖೆಗೆ ಮುಡಾ ಕೇಸ್ ಕೋರಿದ್ದಂತ ಅರ್ಜಿಯ ವಿಚಾರಣೆ ಹೈಕೋರ್ಟ್ ನಲ್ಲಿ ನಡೆಯುತ್ತಿದೆ. ನನಗೆ ಹೈಕೋರ್ಟ್ ಸಿಬಿಐಗೆ ಕೊಟ್ರು ಭಯವೇನು ಇಲ್ಲ. ನಾನು ಆ ಹಗರಣದಲ್ಲಿ ಭಾಗಿಯಾಗಿಯೂ ಇಲ್ಲ ಎಂಬುದಾಗಿ ತಿಳಿಸಿದರು.

ಮುಡಾ ಕೇಸ್ ರಾಜಕೀಯ ಪ್ರೇರಿತವಾಗಿದೆ. ಈ ಪ್ರಕರಣದಲ್ಲಿ ಹೈಕೋರ್ಟ್ ನಿಂದ ನನಗೆ ನ್ಯಾಯ ಸಿಗುವ ವಿಶ್ವಾಸವಿದೆ. ಲೋಕಾಯುಕ್ತ ತನಿಖೆ ನಡೆಯುತ್ತಿರುವಾಗಲೇ ಸಿಬಿಐ ತನಿಖೆಗೆ ಕೋರಿದ್ದಾರೆ. ಕೋರ್ಟ್ ಮೇಲೆ ವಿಶ್ವಾಸವಿದೆ. ನನಗೆ ಯಾವುದೇ ತನಿಖೆಗೆ ನೀಡಿದರೂ ಭಯವಿಲ್ಲ ಎಂಬುದಾಗಿ ಹೇಳಿದರು.