ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನಲೆ: ರಾಜ್ಯದ 6 ಜಿಲ್ಲೆಗಳಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಕಾರಣ, ರಾಜ್ಯದ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಹೀಗಾಗಿ ರೆಡ್ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿದೆ.

ಈ ಬಗ್ಗೆ ಹವಾಮಾನ ಇಲಾಖೆಯ ತಜ್ಞ ಸಿಎಸ್ ಪಾಟೀಲ್ ಮಾಹಿತಿ ನೀಡಿದ್ದು, ಮೇ.24ರಿಂದ ಮೇ.27ರವರೆಗೆ ರಾಜ್ಯದ ಆರು ಜಿಲ್ಲೆಗಳಲ್ಲಿ ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಭಾರೀ ಮಳೆಯಾಗಲಿದೆ. ಹೀಗಾಗಿ ರೆಡ್ ಅಲರ್ಟ್ ನೀಡಲಾಗಿದೆ ಎಂದಿದ್ದಾರೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ ನಾಳೆಯಿಂದ ಮೇ.27ರವರೆಗೆ ಭಾರೀ ಮಳೆಯಾಗಲಿದೆ. ಹೀಗಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.