ಲಾಂಗ್ ಹಿಡಿದು ರೀಲ್ಸ್ ಮಾಡಿದ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಹಾಗೂ ವಿನಯ್ ಪೊಲೀಸರು ವಶಕ್ಕೆ

ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿದ್ದಂತ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಹಾಗೂ ವಿನಯ್ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರನ್ನು ವಶಕ್ಕೆ ಪಡೆದಿರುವಂತ ಪೊಲೀಸರು, ರೀಲ್ಸ್ ಮಾಡಿದಂತ ಸ್ಥಳಕ್ಕೆ ಇಬ್ಬರನ್ನು ಕರೆದೊಯ್ದು ಸ್ಥಳಮಹಜರು ನಡೆಸಲಿದ್ದಾರೆ.

ಇನ್ಸ್ಟಾಗ್ರಾಮ್ ನಲ್ಲಿ 18 ಸೆಕೆಂಡ್ ಗಳ ಕಾಲ ಕೈಯಲ್ಲಿ ಲಾಂಗ್ ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಸಿದಂತೆ ಇದೀಗ ಬಿಗ್ ಬಾಸ್ ಖ್ಯಾತಿಯ ರಜತ್ ಮತ್ತು ವಿನಯ್, ಕಾಟೇರ ಸಿನಿಮಾದ ಮಚ್ಚು ಹಿಡಿದು ರೀಲ್ಸ್ ಮಾಡಿ ವಿವಾದಕ್ಕೆ ಸಿಲುಕಿದ್ದರು. ಪೊಲೀಸರಿಗೆ ನಕಲಿ ಮಚ್ಚು ಒಪ್ಪಿಸಿದ್ದರಿಂದ ಸಾಕ್ಷ್ಯ ನಾಶದ ಕೇಸ್ ದಾಖಲಾಗುವ ಬಂಧನವಾಗುವ ಭೀತಿಯಿಂದ ಪರಾರಿ ಆಗಿದ್ದಾರೆ ಎನ್ನಲಾಗಿತ್ತು.

ಮಚ್ಚು ಹಿಡಿದು ಸಾರ್ವಜನಿಕರ ಸ್ಥಳದಲ್ಲಿ ರೀಲ್ಸ್ ಮಾಡಿದ್ದ ಕೇಸಿನಲ್ಲಿ ಪೊಲೀಸರು ಬಂಧಿಸಿ ಮಚ್ಚು ತಂದು ಒಪ್ಪಿಸುವಂತೆ ತಾಕೀತು ಮಾಡಿದ್ದರು. ಇದರ ಬೆನ್ನಲ್ಲಿಯೇ ರಾತ್ರೋ ರಾತ್ರಿ ರಜತ್ ಕಡೆಯವರು ನಕಲಿ ಫೈಬರ್ ಮಚ್ಚನ್ನು ಪೊಲೀಸರಿಗೆ ತಂದುಕೊಟ್ಟು ಪೊಲೀಸ್ ಠಾಣೆಯಿಂದ ಬಿಡುಗಡೆ ಆಗಿದ್ದರು.

ಆದರೆ, ರೀಲ್ಸ್ ಮಾಡಿದ್ದ ಆಯುಧವನ್ನು ಬದಲಿಸಿ ತಂದಿದ್ದಾರೆ ಎಂಬುದು ತಿಳಿದು ಬಂದಲ್ಲಿ ಸಾಕ್ಷ್ಯ ನಾಶದ ಕೇಸ್ ದಾಖಲಿಸಲಾಗುವುದು ಎಂದು ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದಾರೆ.

ಮಾರಕಾಸ್ತ್ರ ಹಿಡಿದು ಸಾರ್ವಜನಿಕ ಸ್ಥಳದಲ್ಲಿ ಪ್ರದರ್ಶನ ಮಾಡುತ್ತಾ ರೀಲ್ಸ್ ಮಾಡಿದ ಪ್ರಕರಣದಲ್ಲಿ ಬಂಧನವಾದ ಬೆನ್ನಲ್ಲಿಯೇ ಪೊಲೀಸರಿಗೆ ಒಪ್ಪಿಸಿದ ಮಚ್ಚು ನಕಲಿ ಎಂಬ ಅನುಮಾನ ವ್ಯಕ್ತವಾಗುತ್ತಿದೆ.

ಇದೀಗ ಪೊಲೀಸರಿಗೆ ಕೊಟ್ಟಿರುವ ಮಚ್ಚು ಹಾಗೂ ರೀಲ್ಸ್‌ನಲ್ಲಿ ಬಳಕೆ ಮಾಡಿದ ಮಚ್ಚು ತಾಳೆಯಾಗುತ್ತಿಲ್ಲ ಎಂಬುದು ಪೊಲೀಸರಿಗೂ ಅನುಮಾನ ಬಂದಿದೆ. ಇದೀಗ ರಜತ್ ಹಾಗೂ ವಿನಯ್ ಅವರ ಮೇಲೆ ಸಾಕ್ಷ್ಯ ನಾಶದ ಕೇಸ್ ದಾಖಲು ಮಾಡಲಾಗುತ್ತದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ಬಂಧನದ ಭೀತಿಯಿಂದ ವಿಚಾರಣೆಗೆ ಹಾಜರಾಗದ ರಜತ್, ವಿನಯ್. ವಿಚಾರಣೆಗೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟ ರಜತ್ ಇದೀಗ ಇಬ್ಬರ ಫೋನ್ ಕೂಡ ಸ್ವಿಚ್ಡ್ ಆಫ್ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು. ಆದರೇ ಕೊನೆಯ ಕ್ಷಣದಲ್ಲಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಈಗ ಅವರನ್ನು ವಶಕ್ಕೆ ಪಡೆದಿರುವಂತ ಪೊಲೀಸರು, ಅವರನ್ನು ಕರೆದೊಯ್ದು ಸ್ಥಳ ಮಹಜರು ಕೂಡ ನಡೆಸುತ್ತಿದ್ದಾರೆ.