ಬೆಂಗಳೂರು : ರಾಜ್ಯದ ಬಹುತೇಕ ಭಾಗಗಳಲ್ಲಿ ಬರದ(Drought) ಪರಿಣಾಮ ಅತ್ಯಂತ ಗಂಭೀರವಾಗಿದ್ದು, ಆಹಾರ ಉತ್ಪಾದನೆ ಕುಂಠಿತಗೊಂಡಿರುವುದರ ಜೊತೆಗೆ ಜಾನುವಾರುಗಳಿಗೆ ಮೇವಿನ ಕೊರತೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಈ ಸಂಕಷ್ಟವನ್ನು ನಿಭಾಯಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಕೇಂದ್ರ ಸರ್ಕಾರದಿಂದ ಬರ ಪರಿಹಾರದ(Drought Relief) ಅನುದಾನ ಪಡೆಯಲು ನಿರಂತರ ಪ್ರಯತ್ನ ನಡೆಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ. ಪರಮೇಶ್ವರ(DCM DR G Parameshwara) ಅವರು ತಿಳಿಸಿದರು.
ಕಳೆದ ಅಕ್ಟೋಬರ್ 12 ರಂದು ಸುಪ್ರೀಂ ಕೋರ್ಟ್ ಆವರಣದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯ ವೇಳೆ ಮೂರು ತಿಂಗಳ ಗರ್ಭಿಣಿ ಮಹಿಳಾ ಪತ್ರಕರ್ತೆಯ ಮೇಲೆ ದೌರ್ಜನ್ಯ ಎಸಗಲಾಗಿದೆ ಹಾಗೂ ಅವರನ್ನು ತಳ್ಳಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ(Rahul Gandhi) ಸೇರಿದಂತೆ ಇತರ ನಾಯಕರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ.