ಶಿವಮೊಗ್ಗ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ದಿನಾಂಕ: 12.11.2026 ರಿಂದ 10 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಮತ್ತು ಮಹಿಳೆಯರಿಗೆ ಉಚಿತ ಅಣಬೆ ಬೇಸಾಯ ತರಬೇತಿ(Mushroom Cultivation Training) ಶಿಬಿರವನ್ನು ಏರ್ಪಡಿಸಿದೆ. ಈ ಉಚಿತ ಅಣಬೆ ಬೇಸಾಯ(Mushroom Cultivation Training) ತರಬೇತಿಯನ್ನು ಸದುಪಯೋಗ ಪಡಿಸಿಕೊಳ್ಳಲು ಕೋರಿದೆ.
ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 50 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಹಾಗೂ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ಉಚಿತ ಅಣಬೆ ತರಬೇತಿ(Mushroom Cultivation Training) ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.
ಆಸಕ್ತಿಯುಳ್ಳ ಅಭ್ಯರ್ಥಿಗಳು ದಿನಾಂಕ: 12/11/2026 ಗುರುವಾರ ಬೆಳಗ್ಗೆ 10.00 ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬೇಕಾಗಿ ಈ ಮೂಲಕ ಸೂಚಿಸಲಾಗಿದೆ.
ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ದಿನಾಂಕ: 12/11/2026 ರೊಳಗೆ ಸಂಸ್ಥೆಯನ್ನು ಈ ಕೆಳಕಂಡ ದೂರವಾಣಿ ಸಂಖ್ಯೆ 8970476050, 6363139123, 9591514154, 9686248369, 9886935603 ಗಳಿಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದೆಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




