ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ತುಟ್ಟಿಭತ್ಯೆ ಶೇ.1.50ರಷ್ಟು ಹೆಚ್ಚಳ | DA Hike

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರವು ತುಟ್ಟಿಭತ್ಯೆ ದರಗಳನ್ನು ಶೇ.1.50ರಷ್ಟು ಹೆಚ್ಚಳ ಮಾಡಿದೆ. ಈ ಮೂಲಕ ನೌಕರರಿಗೆ ಭರ್ಜರಿ ಸಿಹಿಸುದ್ದಿಯನ್ನು ನೀಡಿದೆ.

ಇಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ಅವರು ಈ ಮಾಹಿತಿ ಹಂಚಿಕೊಂಡಿದ್ದಾರೆ. ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಶೇ.10.75ರಿಂದ 12.25ರಷ್ಟು ಅಂದರೇ 1.50ರಷ್ಟು ಹೆಚ್ಚಳಕ್ಕೆ ಅನುಮೋದಿಸಿ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ದರ ಶೇ.1.50ರಷ್ಟು ಹೆಚ್ಚಳಕ್ಕೆ ಅನುಮೋದಿಸಿದಂತ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಧನ್ಯವಾದಗಳನ್ನು ರಾಜ್ಯಾಧ್ಯಕ್ಷ ಸಿ.ಎಸ್ ಷಡಕ್ಷರಿ ತಿಳಿಸಿದ್ದಾರೆ.