ಬೆಂಗಳೂರು: 2025-26ನೇ ಸಾಲಿನಲ್ಲಿ ಮಾಡುವ ಸರ್ಕಾರಿ ನೌಕರರ ವರ್ಗಾವಣೆ ಮಾರ್ಗಸೂಚಿಗಳ ಅನ್ವಯ, ಜೂನ್.30, 2025ರವರೆಗೆ ವರ್ಗಾವಣೆಗೆ ಅವಧಿಯನ್ನು ವಿಸ್ತರಿಸಿ ಸರ್ಕಾರ ಆದೇಶಿಸಿದೆ.
ಇಂದು ಸುತ್ತೋಲೆ ಹೊರಡಿಸಿರುವಂತ ರಾಜ್ಯ ಸರ್ಕಾರವು, 2025-26ನೇ ಸಾಲಿನಲ್ಲಿ ಸರ್ಕಾರಿ ನೌಕರರ ವರ್ಗಾವಣೆಗಳನ್ನು ನಿಯಂತ್ರಿಸಲು ವರ್ಗಾವಣಾ ಮಾರ್ಗಸೂಚಿಗಳನ್ನು ನೀಡಲಾಗಿದೆ. ಸದರಿ ಆದೇಶದ ಕಂಡಿಕೆ 4ರಲ್ಲಿ 2025-26ನೇ ಸಾಲಿನ ಸಾರ್ವತ್ರಿಕ ವರ್ಗಾವಣೆಗಳನ್ನು ಸದರಿ ಆದೇಶದಲ್ಲಿ ವಿವರಿಸಿರುವ ಷರತ್ತುಗಳಿಗೊಳಪಟ್ಟು ದಿನಾಂಕ: 12.05.2025 ರಿಂದ 14.06.2025 ರವರೆಗೆ ಕೈಗೊಳ್ಳಲು ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖಾ ಸಚಿವರಿಗೆ ಹಾಗೂ ಗ್ರೂಪ್-ಸಿ ಮತ್ತು ಗ್ರೂಪ್-ಡಿ ವೃಂದದ ನೌಕರರಿಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ಪ್ರಾಧಿಕಾರಗಳಿಗೆ ಅಧಿಕಾರ ಪ್ರಯೋಚಿಸಿ ಆದೇಶಿಸಲಾಗಿತ್ತು. ಸದರಿ ವರ್ಗಾವಣೆ ಅವಧಿಯನ್ನು ವಿಸ್ತರಿಸುವುದು ಆವಶ್ಯಕವೆಂದು ಪರಿಗಣಿಸಿ, ಸರ್ಕಾರವು ಈ ಕೆಳಕಂಡಂತೆ ಆದೇಶಿಸಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ದಿನಾಂಕ: 12.05.2025ರ ಸರ್ಕಾರಿ ಆದೇಶದಲ್ಲಿ ವಿವರಿಸಿರುವ ಷರತ್ತಿಗೊಳಪಟ್ಟು 2025-26ನೇ ಸಾಲಿನಲ್ಲಿ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖಾ ಸಚಿವರಿಗೆ ಹಾಗೂ ಗ್ರೂಪ್-ಸಿ ಮತ್ತು ಗ್ರೂಪ್-ಡಿ ವೃಂದದ ನೌಕರರಿಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ಪ್ರಾಧಿಕಾರಗಳಿಗೆ ಅಧಿಕಾರ ಪತ್ಯಾಯೋಜಿಸಲಾಗಿದ್ದ ಅವಧಿಯನ್ನು ದಿನಾಂಕ: 30.06.2025ರವರೆಗೆ ವಿಸ್ತರಿಸಿ ಆದೇಶಿಸಿದೆ.





