ಮಾಜಿ ರೌಡಿ ಶೀಟರ್ ಫೈಟ್ ರವಿಗೆ ಹೈಕೋರ್ಟ್ ನಿಂದ ಜಾಮೀನು ಮಂಜೂರು

ಬೆಂಗಳೂರು: ಗನ್ ತೋರಿಸಿ ಕೊಲೆ ಬೆದರಿಕೆ ಹಾಕಿದ ಸಂಬಂಧ ರೌಡಿ ಶೀಟರ್ ಫೈಟರ್ ರವಿಯನ್ನು ಸದಾಶಿವನಗರ ಠಾಣೆಯ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ಮಲ್ಲಿಕಾರ್ಜುನ ಆಲಿಯಾಸ್ ಫೈಟರ್ ರವಿಯ ವಿರುದ್ದ ಕೇಸ್ ದಾಖಲಾಗಿತ್ತು. ಗನ್ ತೋರಿಸಿ ಕೊಲೆ ಬೆದರಿಕೆ ಹಾಕಿದಂತ ಆರೋಪದಲ್ಲಿ ದಾಖಲಾಗಿದ್ದಂತ ಪ್ರಕರಣ ಸಂಬಂಧ ಅವರನ್ನು ಬಂಧಿಸಲಾಗಿತ್ತು.

ಈ ಪ್ರಕರಣದಲ್ಲಿ ಜಾಮೀನು ಕೋರಿ ಹೈಕೋರ್ಟ್ ಗೆ ಫೈಟರ್ ರವಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ರೌಡಿ ಶೀಟರ್ ಫೈಟರ್ ರವಿಗೆ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಬಿಗ್ ರಿಲೀಫ್ ನೀಡಿದೆ.