ಬೆಂಗಳೂರಿನಲ್ಲಿ ಭಾರೀ ಮಳೆ: ಆರ್‌ಸಿಬಿ-ಕೆಕೆಆರ್‌ ಪಂದ್ಯಕ್ಕೆ ಅಡ್ಡಿ | IPL-2025 Match

ಬೆಂಗಳೂರು: ನಗರದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಇಂದಿನ ಆರ್ ಸಿಬಿ ಮತ್ತು ಕೆಕೆಆರ್ ನಡುವಿನ ಐಪಿಎಲ್-2025 ಪಂದ್ಯಗಳು ( IPL-2025 Match ) ರದ್ದಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಶಾಂತಿನಗರ, ರಿಚ್ಮಡ್ ಸರ್ಕಲ್, ಕಾರ್ಪೊರೇಷನ್, ಕಬ್ಬನ್ ಪಾರ್ಕ್, ಚಿನ್ನಸ್ವಾಮಿ ಮೈದಾನ, ವಿಧಾನಸೌಧ, ಕೆಆರ್ ಮಾರ್ಕೆಟ್, ಮೆಜೆಸ್ಟಿಕ್, ರಾಜಾಜಿನಗರ, ಲಾಲ್ ಬಾಗ್, ಜಯನಗರ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ.

ಐಪಿಎಲ್ ಪಂದ್ಯ ಆರಂಭಕ್ಕೂ ಮುನ್ನವೇ ಬೆಂಗಳೂರಲ್ಲಿ ಮಳೆ( Bengaluru Rain )

ಮತ್ತೊಂದೆಡೆ ಐಪಿಎಸ್ ಪಂದ್ಯಾವಳಿ ಆರಂಭಕ್ಕೆ ಮುನ್ನವೇ ಬೆಂಗಳೂರಲ್ಲಿ ಭಾರಿ ಮಳೆಯಾಗುತ್ತಿದೆ. ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಇಂದಿನ ಐಪಿಎಲ್ ಪಂದ್ಯಕ್ಕೆ ಮಳೆ ಅಡ್ಡಿ ಸಾಧ್ಯತೆ ಇದೆ.

ಅಂದಹಾಗೇ ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಒಪ್ಪಂದ ( India-Pak Casefire ) ಮಾಡಿಕೊಳ್ಳಲಾಗಿದೆ. ಹೀಗಾಗಿ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯ ಸ್ಥಗಿತಗೊಂಡಿತ್ತು. ಈ ನಂತರ ಸ್ಥಗಿತಗೊಂಡಿದ್ದ ಐಪಿಎಲ್‌ ಪಂದ್ಯಗಳು ಇಂದಿನಿಂದ ಮತ್ತೆ ಆರಂಭವಾಗಲಿದೆ. ಈಗಾಗಲೇ 16 ಅಂಕ ಗಳಿಸಿರುವ ಆರ್‌ಸಿಬಿ ನಾಳಿನ ಪಂದ್ಯ ಗೆದ್ದರೆ ಪ್ಲೇ ಆಫ್‌ ಪ್ರವೇಶಿಸಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.